ಎಂಡಿಎಂಎ ಮಾರಾಟ ಆರೋಪಿ ಬಂಧನ

ಮೊಹಮ್ಮದ್ ಝಾಕಿರ್ ಹುಸೇನ್
ಮೊಹಮ್ಮದ್ ಝಾಕಿರ್ ಹುಸೇನ್
Published on
ಮಂಗಳೂರು: ಉಳ್ಳಾಲ ತಾಲೂಕು ಬೆಳ್ಮ ಗ್ರಾಮದ ಫೀಝಾ ಮೈದಾನದಲ್ಲಿ ವಿದ್ಯಾರ್ಥಿಗಳಿಗೆ ಹಾಗೂ ಇತರ ಸಾರ್ವಜನಿಕರಿಗೆ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ. ಆತನಿಂದ 1.06 ಲಕ್ಷ ರೂ. ಮೌಲ್ಯದ 10.6 ಗ್ರಾಂ ತೂಕದ ಎಂಡಿಎಂಎ ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಮಂಗಳೂರಿನ ಕಸಬಾ ಬೆಂಗ್ರೆ ನಿವಾಸಿ ಮೊಹಮ್ಮದ್ ಝಾಕಿರ್ ಹುಸೇನ್ (19) ಬಂಧಿತ ಆರೋಪಿ. ಖಚಿತ ಮಾಹಿತಿಯಂತೆ ದಾಳಿ ನಡೆಸಿದ ಕೊಣಾಜೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಆತನ ಬಳಿಯಿದ್ದ ಮೊಬೈಲ್ ಫೋನ್, ಡಿಜಿಟಲ್ ತೂಕ ಮಾಪನ ಯಂತ್ರ, ಸ್ಮೋಕ್ ಟ್ಯೂಬ್, ಸಿರಿಂಜ್, ಸಿಗರ್ ಲೈಟ್, ನಂಬರ್ ಪ್ಲೇಟ್ ಇಲ್ಲದ ಬೈಕ್ ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಕೊಣಾಜೆ ಠಾಣೆಯಲ್ಲಿ ಎನ್ ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net