ಮಹಿಳೆಯೊಂದಿಗೆ ಅನುಚಿತ ವರ್ತನೆ

ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
Teen keeps Nagpur girl under 'digital arrest' for 3 months before assault
Teen keeps Nagpur girl under 'digital arrest' for 3 months before assault
Published on: 

ಪುತ್ತೂರು ಗ್ರಾಮಾಂತರ: ಅಂಗನವಾಡಿ ಕೇಂದ್ರದಿಂದ ಪುತ್ರಿಯನ್ನು ಕರೆದುಕೊಂಡು ಬರಲು ನಡೆದುಕೊಂಡು ಹೋಗುತ್ತಿದ್ದ ಮಹಿಳೆಯನ್ನು ಸ್ಕೂಟರ್‌ನಲ್ಲಿ ಹಿಂಬಾಲಿಸಿ ಬಂದ ವ್ಯಕ್ತಿ ಅನುಚಿತವಾಗಿ ವರ್ತಿಸಿದ ಘಟನೆ ಕುರಿಯ ಶಾಲೆ ಬಳಿ ನಡೆದಿದ್ದು, ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಿಳೆ ಕಳೆದ ಶುಕ್ರವಾರ ಮಧ್ಯಾಹ್ನ ಕುರಿಯ ಗ್ರಾಮದ ಮಾವಿನಕಟ್ಟೆಯಲ್ಲಿರುವ ಅಂಗನವಾಡಿ ಕೇಂದ್ರಕ್ಕೆ ತನ್ನ ಪುತ್ರಿಯನ್ನು ಕರೆದುಕೊಂಡು ಬರಲು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಪಂಜಳ ಕಡೆಯಿಂದ ಸ್ಕೂಟರಿನಲ್ಲಿ ಬಂದ ಯುವಕನೊಬ್ಬ ಸ್ಕೂಟರ್‌ನಲ್ಲಿ ಬರುವಂತೆ ಒತ್ತಾಯಿಸಿದ್ದಾನೆ. ಮಹಿಳೆ ನಿರಾಕರಿಸಿ ಮುಂದೆ ಸಾಗಿದಾಗ ಹಿಂಬಾಲಿಸಿಕೊಂಡು ಹೋಗಿ ಆಕೆಯೊಂದಿಗೆ ಅನುಚಿತವಾಗಿ ವರ್ತಿಸಿರುವುದಾಗಿ ಆರೋಪಿಸಲಾಗಿದೆ.

ಮಹಿಳೆ ಬೊಬ್ಬೆ ಹಾಕಿದಾಗ ಪರಿಸರದ ಮಂದಿ ಆರೋಪಿ ಯುವಕನನ್ನು ಹಿಡಿದು ವಿಚಾರಿಸಿದಾಗ ಆತ ನರಿಮೊಗರು ಗ್ರಾಮದ ಪುರುಷರಕಟ್ಟೆಯ ನಿವಾಸಿ ಇಯಾಸ್ ಎಂದು ತಿಳಿದು ಬಂದಿದೆ. ಸಂಪ್ಯ ಠಾಣೆ ಪೊಲೀಸರು ಆರೋಪಿ ಇಯಾಸ್‌ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ನ್ಯಾಯಾಲಯ ಜಾಮೀನಿನ ಮೇಲೆ ಆರೋಪಿಯನ್ನು ಬಿಡುಗಡೆ ಮಾಡಿದೆ.