ರಸ್ತೆ ಅಭಿವೃದ್ಧಿಗೆ ಇನ್ನಷ್ಟು ಅನುದಾನ : ಭಾಗೀರಥಿ ಮುರುಳ್ಯ
ಅಡೆಂಜ ದೇವಸ್ಥಾನ ಸಂಪರ್ಕ ರಸ್ತೆಯನ್ನು ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಿದರು. ನೂಜಿಬಾಳ್ತಿಲ ಗ್ರಾಪಂ ಅಧ್ಯಕ್ಷೆ ಚಂದ್ರಾವತಿ, ಗ್ರಾಪಂ ಸದಸ್ಯರಾದ ಗಂಗಮ್ಮ ಕಲ್ಲುಗುಡ್ಡೆ, ವಿಜಯಲಕ್ಷ್ಮೀ, ವಿನಯಕುಮಾರಿ ಬಳಕ್ಕ ಉಪಸ್ಥಿತರಿದ್ದರು.
Published on:
Copied
Follow Us
ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಪಂನ ಅಡೆಂಜ ದೇವಸ್ಥಾನ ಸಂಪರ್ಕ ರಸ್ತೆ ಉದ್ಘಾಟಿಸಿ ಮಾತನಾಡಿದರು.
ಇಲ್ಲಿನ ಮುಂದುವರಿದ ರಸ್ತೆ ಅಭಿವೃದ್ಧಿಗೆ 15 ಲಕ್ಷ ರೂ. ಅನುದಾನ ಇರಿಸಲಾಗಿದ್ದು, ಶೀಘ್ರದಲ್ಲಿ ಈ ಅನುದಾನದಲ್ಲಿ ಇಲ್ಲಿನ ರಸ್ತೆ ಅಭಿವೃದ್ಧಿ ನಡೆಸಲಾಗುವುದು. ಆ ಮೂಲಕ ಪ್ರಮುಖ ರಸ್ತೆಗಳ ಅಭಿವೃದ್ಧಿ ಆಗುವ ಮೂಲಕ ಈ ಭಾಗದ ಗ್ರಾಮಸ್ಥರಿಗೆ ಪ್ರಯೋಜನವಾಗಲಿದ್ದು, ಗ್ರಾಮದ ಅಭಿವೃದ್ಧಿಗೂ ಪೂರಕವಾಗಲಿದೆ ಎಂದರು.