ಮಾಜಿ ಸಚಿವ ಅಭಯಚಂದ್ರ ಜೈನ್ ಅಧ್ಯಕ್ಷತೆ ವಹಿಸಿದ್ದರು. ನವಮೈತ್ರಿ ಸಂಘದ ಅಧ್ಯಕ್ಷ ಸತೀಶ್ ಶೆಟ್ಟಿ, ಹೊಸಬೆಟ್ಟು ಸಹಕಾರ ಸಂಘದ ಅಧ್ಯಕ್ಷ ರಾಜೇಶ್, ನಿರ್ದೇಶಕ ಪದ್ಮಪ್ರಸಾದ್ ಜೈನ್, ಪೆರಾಡಿ ಸಿ.ಎ. ಬ್ಯಾಂಕ್ ಅಧ್ಯಕ್ಷ ಸತೀಶ್ ಕಾಶಿಪಟ್ಣ, ನೆಲ್ಲಿಕಾರು ಸಹಕಾರಿ ಸಂಘದ ಅಧ್ಯಕ್ಷ ಜಯವರ್ಮ ಜೈನ್, ಪ್ರಿಯದರ್ಶಿನಿ ಸಹಕಾರ ಸಂಘದ ಅಧ್ಯಕ್ಷ ವಸಂತ ಬೆರ್ನಾರ್ಡ್, ಶಿರ್ತಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಆಗ್ನೆಸ್ ಡಿಸೋಜ, ಉಪಾಧ್ಯಕ್ಷ ಸಂತೋಷ್ ಕೋಟ್ಯಾನ್, ಶಿರ್ತಾಡಿ ಸಹಕಾರ ಸಂಘದ ಉಪಾಧ್ಯಕ್ಷ ಚಿಂತನ್ ಲೋಬೊ, ಸಿಇಒ ವಿಮಲಾಜಿ, ಜಿಲ್ಲಾ ಸಹಕಾರ ಸಂಘದ ವಿಲಾಸ್ ಕುಮಾರ್, ಕಟ್ಟಡ ಮಾಲೀಕ ಹಸನಬ್ಬ ಸೇರಿದಂತೆ ಸಂಘದ ನಿರ್ದೇಶಕರು ಉಪಸ್ಥಿತರಿದ್ದರು. ರಾಮ್ ಕುಮಾರ್ ಮಾರ್ನಾಡ್ ಕಾರ್ಯಕ್ರಮ ನಿರೂಪಿಸಿದರು.