ಮುಂದಿನ 2 ವರ್ಷದಲ್ಲಿ ಇನ್ನಷ್ಟು ಅಭಿವೃದ್ಧಿ ಕಾರ್ಯ : ಅಶೋಕ್ ರೈ

ಕಲ್ಲರ್ಪೆಯಲ್ಲಿ ವಿವಿಧ ಕಾಮಗಾರಿಗಳನ್ನು ಶಾಸಕ ಅಶೋಕ್ ರೈ ಉದ್ಘಾಟಿಸಿದರು. ಪ್ರಮುಖರಾದ ಕಾವು ಹೇಮನಾಥ ಶೆಟ್ಟಿ, ಕೃಷ್ಣಪ್ರಸಾದ್ ಆಳ್ವ, ಅನಿತಾ ಹೇಮನಾಥ ಶೆಟ್ಟಿ ಮತ್ತಿತರರಿದ್ದರು.
ಕಲ್ಲರ್ಪೆಯಲ್ಲಿ ವಿವಿಧ ಕಾಮಗಾರಿಗಳನ್ನು ಶಾಸಕ ಅಶೋಕ್ ರೈ ಉದ್ಘಾಟಿಸಿದರು. ಪ್ರಮುಖರಾದ ಕಾವು ಹೇಮನಾಥ ಶೆಟ್ಟಿ, ಕೃಷ್ಣಪ್ರಸಾದ್ ಆಳ್ವ, ಅನಿತಾ ಹೇಮನಾಥ ಶೆಟ್ಟಿ ಮತ್ತಿತರರಿದ್ದರು.
Published on
ಆರ್ಯಾಪು ಗ್ರಾಮದ ಕಲ್ಲರ್ಪೆಯಲ್ಲಿ ನೂತನವಾಗಿ ನಿರ್ಮಿಸಲಾದ ಪ್ರಯಾಣಿಕರ ಬಸ್ ತಂಗುದಾಣ, ಕಲ್ಲರ್ಪೆಯಲ್ಲಿ ನೂತನವಾಗಿ ಅಳವಡಿಸಲಾದ 5 ವಿದ್ಯುತ್ ಟ್ರಾನ್ಸ್‌ಫಾರ್ಮರ್ ಹಾಗೂ 5 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾದ ಕಲ್ಲಕಟ್ಟ ರಾಜನ್‌ಗುಳಿಗ ದೈವಸ್ಥಾನ ಸಂಪರ್ಕದ ಕಾಂಕ್ರೀಟ್ ರಸ್ತೆಯನ್ನು ಉದ್ಘಾಟಿಸಿ ಮಾತನಾಡಿದರು.
ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಷ್ಣಪ್ರಸಾದ್ ಆಳ್ವ ಅಧ್ಯಕ್ಷತೆ ವಹಿಸಿದ್ದರು.
ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ, ಆರ್ಯಾಪು ವಲಯ ಕಾಂಗ್ರೆಸ್ ಅಧ್ಯಕ್ಷ ಗಿರೀಶ್ ರೈ, ಮಾಜಿ ಜಿ.ಪಂ. ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ, ಕಾರ್ಪಾಡಿ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸದಾನಂದ ಶೆಟ್ಟಿ ಕೂರೇಲು, ಮೆಸ್ಕಾಂ ಜೆಇ ರಮೇಶ್, ಪಕ್ಷದ ಸ್ಥಳೀಯ ಮುಖಂಡರಾದ ಶಿವಪ್ರಸಾದ್, ಕೇಶವ ಸುವರ್ಣ ಮೇರ್ಲ, ಹಾರಿಸ್ ಸಂಟ್ಯಾರು, ಸಲಾಂ ಸಂಪ್ಯ, ಪದ್ಮನಾಭ ಕೊಲ್ಯ, ಸೀತಾರಾಮ ರೈ ಕೈಕಾರ, ಮೀನಾಕ್ಷಿ ನೀರ್ಕಜೆ ಮತ್ತಿತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net