ಕ್ರೀಡೆ ಮೂಲಕ ಅಂಬೇಡ್ಕರ್ ವಿಚಾರಧಾರೆ: ಸತೀಶ್ ಜಾರಕಿಹೊಳಿ

ಕ್ರೀಡಾಕೂಟ ಸಮಾರೋಪ ಸಮಾರಂಭದಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಕ್ರಿಕೆಟ್ ಆಟ ಆಡಿದರು.
ಕ್ರೀಡಾಕೂಟ ಸಮಾರೋಪ ಸಮಾರಂಭದಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಕ್ರಿಕೆಟ್ ಆಟ ಆಡಿದರು.
Published on
ವಿಜಯವಾಣಿ ಸುದ್ದಿಜಾಲ ಉಳ್ಳಾಲ
ಅಖಿಲ ಕರ್ನಾಟಕ ಮಹಾನಾಯಕ ಜೈ ಭೀಮ್ ಬಳಗ, ಉಳ್ಳಾಲ ತಾಲೂಕು ಕ್ರೀಡಾ ಮತ್ತು ಸಾಂಸ್ಕೃತಿಕ ಘಟಕದಿಂದ ಪರಿಶಿಷ್ಟ ಜಾತಿ, ಪಂಗಡದವರಿಗೆ ಉಳ್ಳಾಲ ವಿಧಾನಸಭಾ ಕ್ಷೇತ್ರದ ಬಾಳೆಪುಣಿ ರಾಜೀವ್ ಗಾಂಧಿ ಪಂಚಾಯಿತಿ ಮೈದಾನದಲ್ಲಿ ಮೂರು ದಿನ ನಡೆದ ಹೊನಲು ಬೆಳಕಿನ ಲೀಗ್ ಕಂ ನಾಕೌಟ್ ಮಾದರಿಯ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
ಸ್ಪೀಕರ್ ಯು.ಟಿ.ಖಾದರ್ ಮಾತನಾಡಿ, ದೇಶದ ಕಟ್ಟಕಡೆಯ ವ್ಯಕ್ತಿಯೂ ದೇಶದಾದ್ಯಂತ ನಿರ್ಭೀತಿಯಿಂದ ಓಡಾಡಲು ಅಂಬೇಡ್ಕರ್ ಬರೆದ ಸಂವಿಧಾನ ಕಾರಣ ಎಂದರು.
ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವ, ಮೂಡ ಅಧ್ಯಕ್ಷ ಸದಾಶಿವ ಉಳ್ಳಾಲ್, ಕೆಪಿಸಿಸಿ ಕಾರ್ಯದರ್ಶಿ ಪದ್ಮರಾಜ್ ಆರ್.ಪೂಜಾರಿ, ಪಜೀರ್ ಗ್ರಾಪಂ ಮಾಜಿ ಅಧ್ಯಕ್ಷ ಭರತ್ ರಾಜ್ ಪಜೀರುಗುತ್ತು, ಬಾಳೆಪುಣಿ ಗ್ರಾಪಂ ಉಪಾಧ್ಯಕ್ಷ ಸಿ.ಎಂ.ಶರೀಫ್ ಪಟ್ಟೋರಿ, ಕರ್ನಾಟಕ ಕೊಳಗೇರಿ ಮಂಡಳಿ ಅಧ್ಯಕ್ಷ ಅಬ್ಬಯ್ಯ ಪ್ರಸಾದ್, ಬಾಳೆಪುಣಿ ಗ್ರಾಪಂ ಅಧ್ಯಕ್ಷೆ ಗೀತಾ ಭಂಡಾರಿ, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಶೆಟ್ಟಿ, ಮೆಸ್ಕಾಂ ಸಲಹಾ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್, ಬಂಟ್ವಾಳ ತಾಪಂ ಮಾಜಿ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಳ್ಳಾಲ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಚಂದ್ರಿಕಾ ರೈ, ಕೊಣಾಜೆ ಗ್ರಾಪಂ ಮಾಜಿ ಅಧ್ಯಕ್ಷ ನಝರ್ ಷಾ ಪಟ್ಟೋರಿ ಉಪಸ್ಥಿತರಿದ್ದರು. ಕ್ರೀಡಾಕೂಟ ಸಂಯೋಜಕ ರೋಹಿತ್ ಉಳ್ಳಾಲ್ ಕಾರ್ಯಕ್ರಮ ನಿರೂಪಿಸಿದರು.
"

ಬಾಳೆಪುಣಿ ಮೈದಾನದ ಆರ್‌ಟಿಸಿಯನ್ನು ಯುವಜನ ಮತ್ತು ಕ್ರೀಡಾ ಇಲಾಖೆ ಹೆಸರಿಗೆ ಮಾಡಿಸಿದರೆ ಮಿನಿ ಸ್ಟೇಡಿಯಂ ನಿರ್ಮಾಣಕ್ಕೆ 2 ಕೋಟಿ ಅನುದಾನ ಬಿಡುಗಡೆಗೊಳಿಸಲಾಗುವುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net