ಪ್ರದರ್ಶನದ ಅಂಗವಾಗಿ ಸುಮಾರು 15,000 ಸಂಖ್ಯೆಯ 30 ಜಾತಿಯ ಹೂವುಗಳಾದ ಸಾಲ್ವಿಯ, ಸೇವಂತಿಗೆ, ಚೆಂಡು ಹೂ, ಜೀನಿಯಾ, ಡಯಾಂಥಸ್, ಆಸ್ಟರ್, ವಿಂಕಾ ರೋಸಿಯಾ, ಕಾಕ್ಸ್ ಕೋಂಬ್, ಡೇಲಿಯಾ, ಪೆಟೋನಿಯಾ, ಟೊರಿನೋ ಇತ್ಯಾದಿ ಹೂವುಗಳನ್ನು ಕುಂಡಗಳಲ್ಲಿ ಬೆಳೆಯಲಾಗಿದೆ. ತರಕಾರಿ ಕೈತೋಟವನ್ನು ರಚಿಸಲಾಗಿದೆ. ಜಿಲ್ಲೆಯ ಪ್ರಾಮುಖ್ಯತೆ ಬಗ್ಗೆ ಹಾಗೂ ವಿವಿಧ ಕ್ಷೇತ್ರಗಳ ಗಣ್ಯರ ಬಗ್ಗೆ ಹಣ್ಣು ಮತ್ತು ತರಕಾರಿಗಳಿಂದ ಕಲಾವಿದರು ಕಲಾಕೃತಿಗಳನ್ನು ಪ್ರದರ್ಶಿಸಲಿದ್ದಾರೆ. ವಿವಿಧ ಅಲಂಕಾರಿಕ ಗಿಡಗಳು, ಬೊನ್ಸಾಯ್ ಗಿಡಗಳ ಪ್ರದರ್ಶನ, ಇಕೆಬಾನೆ ಹೂವಿನ ಜೋಡಣೆಯ ಪ್ರದರ್ಶನ ಏರ್ಪಡಿಸಲಾಗುವುದು. ಜೇನಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಸೇರಿದಂತೆ ವಿವಿಧ ಇಲಾಖೆಗಳ ಪ್ರದರ್ಶನ ಮಳಿಗೆಯೂ ಇರಲಿದೆ ಎಂದು ಅವರು ಹೇಳಿದರು.