ಸರ್ಕಾರಿ ನೌಕರರಿಂದ ಸಮರ್ಪಕ ಕಾರ್ಯನಿರ್ವಹಣೆ : ಭಾಗೀರಥಿ ಮುರುಳ್ಯ

ಕಡಬದ ಸೇಂಟ್ ಜೋಕಿಮ್ಸ್ ಮೈದಾನದಲ್ಲಿ ಸರ್ಕಾರಿ ನೌಕರರ ಸಂಘದ ಕ್ರೀಡಾಕೂಟವನ್ನು ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಿದರು. ತಹಸೀಲ್ದಾರ್ ಪ್ರಭಾಕರ ಖಜೂರೆ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ ಎಚ್., ವಿಮಲ್ ಕುಮಾರ್ ಮತ್ತಿತರರಿದ್ದರು.
ಕಡಬದ ಸೇಂಟ್ ಜೋಕಿಮ್ಸ್ ಮೈದಾನದಲ್ಲಿ ಸರ್ಕಾರಿ ನೌಕರರ ಸಂಘದ ಕ್ರೀಡಾಕೂಟವನ್ನು ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಿದರು. ತಹಸೀಲ್ದಾರ್ ಪ್ರಭಾಕರ ಖಜೂರೆ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ ಎಚ್., ವಿಮಲ್ ಕುಮಾರ್ ಮತ್ತಿತರರಿದ್ದರು.
Published on
ಜನರಿಗೆ ಸರ್ವ ರೀತಿಯಲ್ಲೂ ನೆರವಾಗುವ ಕ್ಷೇತ್ರವೇ ಸರ್ಕಾರಿ ನೌಕರಿ. ಅದನ್ನು ಸಮರ್ಪಕವಾಗಿ ನಿರ್ವಹಿಸಿ ಅವಕಾಶ ಸದುಪಯೋಗಪಡಿಸಿಕೊಳ್ಳಬೇಕು ಎಂದು ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕಡಬ ತಾಲೂಕು ಶಾಖೆ ವತಿಯಿಂದ ಕಡಬದ ಸೇಂಟ್ ಜೋಕಿಮ್ಸ್ ಮೈದಾನದಲ್ಲಿ ಭಾನುವಾರ ಆಯೋಜಿಸಿದ್ದ ಕ್ರೀಡಾಕೂಟ ಹಾಗೂ ಕ್ಯಾಲೆಂಡರ್ ಬಿಡುಗಡೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕಡಬ ತಾಲೂಕು ಶಾಖೆ ಅಧ್ಯಕ್ಷ ವಿಮಲ್ ಕುಮಾರ್ ನೆಲ್ಯಾಡಿ ಅಧ್ಯಕ್ಷತೆ ವಹಿಸಿದ್ದರು. ಕಡಬ ತಹಸೀಲ್ದಾರ್ ಪ್ರಭಾಕರ ಖಜೂರೆ ಕ್ಯಾಲೆಂಡರ್ ಬಿಡುಗಡೆಗೊಳಿಸಿದರು.
ತಾ.ಪಂ. ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ ಎಚ್., ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿ ವಿಮಲ್ ಬಾಬು ಆರ್., ಪಂಚಾಯತ್‌ರಾಜ್ ಇಂಜಿನಿಯರಿಂಗ್ ಉಪವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಭರತ್ ಬಿ.ಎಂ., ಪಶು ವೈದ್ಯಾಧಿಕಾರಿ ಡಾ.ಅಜಿತ್, ಕಡಬ ಸೇಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಗಳ ಸಂಚಾಲಕ ಪ್ರಕಾಶ್ ಪಾವ್ಲ್ ಡಿಸೋಜ, ಬಂಟ್ವಾಳ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ, ಸಂಘದ ರಾಜ್ಯ ಪರಿಷತ್ ಸದಸ್ಯ ಯಶ್‌ರಾಜ್, ದೇವರಾಜು, ಶಿವಪ್ರಸಾದ್ ರೈ ಮತ್ತಿತರರು ಉಪಸ್ಥಿತರಿದ್ದರು.
ಶಾಸಕರು, ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಸನ್ಮಾನಿಸಲಾಯಿತು. ರಾಜ್ಯಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ತಾಲೂಕನ್ನು ಪ್ರತಿನಿಧಿಸಿದ ತಾಲೂಕು ಸಂಘದ ಸದಸ್ಯರು ಹಾಗೂ ಕಾರ್ಯಕ್ರಮಕ್ಕೆ ನೆರವು ನೀಡಿದವರನ್ನು ಗೌರವಿಸಲಾಯಿತು. ಗೋವಿಂದ ನಾಯಕ್ ಸ್ವಾಗತಿಸಿದರು. ಯಶವಂತ ಬೆಳ್ಚಡ ವಂದಿಸಿದರು.ಶಿವಣ್ಣ, ಮಹೇಶ್ ನಿರೂಪಿಸಿದರು.

ಮುಖ್ಯಮಂತ್ರಿ ಜತೆ ಚರ್ಚೆ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net