

ವಿಜಯವಾಣಿ ಸುದ್ದಿಜಾಲ ಕಡಬ
ರಾಜ್ಯ ಸರ್ಕಾರ ಜಾರಿಗೆ ತಂದು ಅನುಷ್ಠಾನಿಸಿರುವ ಪಂಚ ಗ್ಯಾರಂಟಿ ಯೋಜನೆಯಲ್ಲಿ ಕಡಬ ತಾಲೂಕಿಗೆ 224 ಕೋಟಿ ರೂ.ನಷ್ಟು ಪ್ರಯೋಜನವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಕಡಬ ತಾಲೂಕು ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ ಹೇಳಿದರು.
ಕಡಬ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ವತಿಯಿಂದ ಕಡಬ ಪಟ್ಟಣ ಪಂಚಾಯಿತಿ ಹಾಗೂ ಕುಟ್ರುಪ್ಪಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ಯಾರಂಟಿ ಯೋಜನೆಗೆ ನೋಂದಣಿಗೆ ಬಾಕಿ ಇರುವ ಮತ್ತು ತಿರಸ್ಕೃತ ಅರ್ಜಿಗಳ ವಿಲೇವಾರಿ ಶಿಬಿರ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕಡಬ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ತಮನ್ನಾ ಜಬಿನ್, ಸ್ಥಾಯಿ ಸಮಿತಿಯ ಅಧ್ಯಕ್ಷ ಕೆ.ಎಂ.ಹನೀಫ್, ಅನುಷ್ಠಾನ ಸಮಿತಿ ಸದಸ್ಯೆ ಉಷಾ ಅಂಚನ್ ಮಾತನಾಡಿದರು. ಜಿಪಂ ಮಾಜಿ ಸದಸ್ಯ ಪಿ.ಪಿ.ವರ್ಗೀಸ್, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಸದಸ್ಯ ಅಶೋಕ್ ನೆಕ್ರಾಜೆ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಇ.ಲೀಲಾವತಿ, ಅನುಷ್ಠಾನ ಸಮಿತಿ ಸದಸ್ಯರಾದ ಗೌರಿ, ಭವಾನಿಶಂಕರ್, ಜಗದೀಶ್, ಗಂಗಾಧರ ಶೆಟ್ಟಿ, ಸತೀಶ್ ಪಿ.ಎನ್, ಹರಿಣಾಕ್ಷಿ ಮತ್ತಿತರರು ಉಪಸ್ಥಿತರಿದ್ದರು.
ತಾಪಂ ಇಒ ನವೀನ್ ಭಂಡಾರಿ ಪ್ರಸ್ತಾವನೆಗೈದರು. ಪಪಂ ಸಿಬ್ಬಂದಿ ಹರೀಶ್ ಬೆದ್ರಾಜೆ ಸ್ವಾಗತಿಸಿದರು. ಕುಟ್ರುಪ್ಪಾಡಿ ಪಿಡಿಒ ಆನಂದ ಗೌಡ ವಂದಿಸಿದರು. ತಾಪಂ ಐಇಸಿ ಭರತ್ ರಾಜ್ ಕಾರ್ಯಕ್ರಮ ನಿರೂಪಿಸಿದರು.