ಪ್ರಭಾಕರ ಭಟ್ ಜಾಮೀನು ಅರ್ಜಿ ಮುಂದೂಡಿಕೆ

ಕಲ್ಲಡ್ಕ ಪ್ರಭಾಕರ ಭಟ್
ಕಲ್ಲಡ್ಕ ಪ್ರಭಾಕರ ಭಟ್
Published on
ಪುತ್ತೂರು: ಕೋಮುಸೌಹಾರ್ದ ಮತ್ತು ಮಹಿಳೆಯ ಘನತೆಗೆ ಧಕ್ಕೆ ತಂದಿದ್ದ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಜಾಮೀನು ಅರ್ಜಿ ಮಂಗಳವಾರ ಇತ್ಯರ್ಥವಾಗದೆ ಮುಂದೂಡಲ್ಪಟ್ಟಿತು.
ಬಿಎನ್‌ಎಸ್‌ಎಸ್ ಸೆಕ್ಷನ್ ೩೩೮, ೩೩೯ ಪ್ರಕಾರ ಜನವಾದಿ ಮಹಿಳಾ ಸಂಘಟನೆಯ ನಾಯಕಿ ಈಶ್ವರಿ ಪದ್ಮುಂಜ ಪರ ಹಿರಿಯ ವಕೀಲ ಸತೀಶನ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ವಾದ ಮಂಡಿಸಲು ಸಮಯಾವಕಾಶ ಕೇಳಿದರು. ಪೊಲೀಸರ ಪರ ಸರ್ಕಾರಿ ವಕೀಲರು ಜಾಮೀನು ಅರ್ಜಿಗೆ ಆರು ಪುಟಗಳ ತಕರಾರು ಅರ್ಜಿ ಸಲ್ಲಿಸಿದ್ದು, ನ್ಯಾಯಾಲಯ ವಿಚಾರಣೆಯನ್ನು ನ.೧೦ಕ್ಕೆ ಮುಂದೂಡಿದೆ.
ಮಂಗಳವಾರ ಅರ್ಜಿ ವಿಚಾರಣೆಗೆ ಬಂದಾಗ ಈಶ್ವರಿ ಪದ್ಮುಂಜ ಪರ ವಕೀಲ ಸತೀಶನ್ ಅರ್ಜಿಗೆ ಪ್ರಭಾಕರ ಭಟ್ ಪರ ವಕೀಲರು ಆಕ್ಷೇಪಣೆ ಸಲ್ಲಿಸಿಲ್ಲ. ಅರ್ಜಿ ಸಂಬಂಧ ವಿಸ್ತೃತ ವಾದ ಮಂಡಿಸಲು ವಕೀಲ ಸತೀಶನ್ ಸಮಯಾವಕಾಶ ಕೇಳಿದ್ದು, ಅರ್ಜಿ ವಿಚಾರಣೆಯನ್ನು ನ.೧೦ಕ್ಕೆ ಮುಂದೂಡಲಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net