ಬಿಎನ್‌ಎಸ್‌ಎಸ್ ಸೆಕ್ಷನ್ ೩೩೮, ೩೩೯ ಪ್ರಕಾರ ಜನವಾದಿ ಮಹಿಳಾ ಸಂಘಟನೆಯ ನಾಯಕಿ ಈಶ್ವರಿ ಪದ್ಮುಂಜ ಪರ ಹಿರಿಯ ವಕೀಲ ಸತೀಶನ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ವಾದ ಮಂಡಿಸಲು ಸಮಯಾವಕಾಶ ಕೇಳಿದರು. ಪೊಲೀಸರ ಪರ ಸರ್ಕಾರಿ ವಕೀಲರು ಜಾಮೀನು ಅರ್ಜಿಗೆ ಆರು ಪುಟಗಳ ತಕರಾರು ಅರ್ಜಿ ಸಲ್ಲಿಸಿದ್ದು, ನ್ಯಾಯಾಲಯ ವಿಚಾರಣೆಯನ್ನು ನ.೧೦ಕ್ಕೆ ಮುಂದೂಡಿದೆ.