ವಿಧಾನಸಭಾಧ್ಯಕ್ಷ ಯು.ಟಿ.ಖಾದರ್, ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ, ಅಭಯಚಂದ್ರ ಜೈನ್, ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್, ಶ್ರೀಕ್ಷೇತ್ರ ಕುದ್ರೋಳಿ ಕೋಶಾಧಿಕಾರಿ ಪದ್ಮರಾಜ್ ಪೂಜಾರಿ, ಗಿರೀಶ್ ಆಳ್ವ, ಕೀರ್ತಿ ಗಣೇಶ್, ಜಗದೀಶ ಅಧಿಕಾರಿ, ಕಂಬಳ ಸಮಿತಿ ಗೌರವಾಧ್ಯಕ್ಷ ಪದ್ಮನಾಭ ಕೋಟ್ಯಾನ್, ಸ್ಥಾಪಕಾಧ್ಯಕ್ಷ ರಾಜಕುಮಾರ್ ಶೆಟ್ಟಿ ತಿರುವೈಲುಗುತ್ತು, ಕಾರ್ಯಾಧ್ಯಕ್ಷ ಜಗದೀಶ ಶೆಟ್ಟಿ ಮಾಣಿಬೆಟ್ಟುಗುತ್ತು, ಪ್ರಧಾನ ಕಾರ್ಯದರ್ಶಿ ಯಶವಂತ ಶೆಟ್ಟಿ ಬೆಳ್ಳೂರುಗುತ್ತು, ಸಮಿತಿ ಪದಾಧಿಕಾರಿಗಳು ಹಾಗೂ ಸದಸ್ಯರು ಇದ್ದರು. ಮೂಳೂರು-ಅಡ್ಡೂರು ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷ ಇನಾಯತ್ ಅಲಿ ಸ್ವಾಗತಿಸಿದರು. ಚೇತನ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಗುರುಪುರ ಕಂಬಳದಲ್ಲಿ ಒಟ್ಟು 177 ಜೋಡಿ ಕೋಣಗಳು ಭಾಗವಹಿಸಿವೆ.