

ಉಳ್ಳಾಲ: ಕಣಚೂರು ಶಿಕ್ಷಣ ಸಂಸ್ಥೆಗಳ ವತಿಯಿಂದ ದೇರಳಕಟ್ಟೆ ಜಂಕ್ಷನ್‌ನಲ್ಲಿ ನಿರ್ಮಿಸಲಾದ ಕ್ಲಾಕ್ ಟವರ್ ವೃತ್ತವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಉದ್ಘಾಟಿಸಿದರು.
ಕಣಚೂರು ಶಿಕ್ಷಣ ಸಂಸ್ಥೆಗಳ ನಿರ್ದೇಶಕ ಅಬ್ದುಲ್ ರಹ್ಮಾನ್ ಮಾತನಾಡಿ, ಇಲ್ಲಿ ನಿರ್ಮಿಸಲಾಗಿರುವ ಕ್ಲಾಕ್ ಟವರ್ ವೃತ್ತ ಸ್ಪೀಕರ್ ಅವರ ದೂರದೃಷ್ಟಿಯ ಫಲ. ಕಣಚೂರು ಸಂಸ್ಥೆ 25 ವರ್ಷಗಳಿಂದ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಾ ಬಂದಿದೆ. ಕರ್ನಾಟಕ ಮತ್ತು ಕೇರಳ ಭಾಗದಲ್ಲಿ ಉಚಿತ ಆರೋಗ್ಯ ಸೇವೆ ನೀಡುತ್ತಿದೆ ಎಂದರು.
ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್, ವಸತಿ ಮತ್ತು ವಕ್ಫ್ ಸಚಿವ ಜಮೀರ್ ಅಹ್ಮದ್, ಕಣಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಅಧ್ಯಕ್ಷ ಯು.ಕೆ.ಮೋನು ಕಣಚೂರು ಮತ್ತಿತರರು ಉಪಸ್ಥಿತರಿದ್ದರು.