ಮಂಗಳೂರು: ಎಸ್‌ವಿಪಿ ಕನ್ನಡ ಅಧ್ಯಯನ ಸಂಸ್ಥೆ ಮಂಗಳೂರು ವಿವಿ ಇಲ್ಲಿನ ಸಹಾಯಕ ಪ್ರಾಧ್ಯಾಪಕ ಡಾ.ಧನಂಜಯ ಕುಂಬ್ಳೆ ಮಾರ್ಗದರ್ಶನದಲ್ಲಿ ಶ್ರೀ ನಾರಾಯಣ ಗುರು ವಿದ್ಯಾಸಂಸ್ಥೆಯ ಉಪನ್ಯಾಸಕ ಕೇಶವ ಬಂಗೇರ ಬಿ. ಅವರು ಮಂಗಳೂರು ವಿಶ್ವವಿದ್ಯಾಲಯಕ್ಕೆ ಮಂಡಿಸಿದ ತುಳು ರಂಗಭೂಮಿ ಮತ್ತು ಸಿನೆಮಾ: ಪ್ರೇರಣೆ ಮತ್ತು ಅನನ್ಯತೆ ಎಂಬ ಮಹಾಪ್ರಬಂಧಕ್ಕೆ ಪಿಎಚ್‌ಡಿ ಪದವಿ ನೀಡಿ ಗೌರವಿಸಿದೆ.