ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯಿಂದ ನಡೆದ ಡಾ.ಕೋಡಿ ಕುಶಾಲಪ್ಪ ಗೌಡರ ನೆನಪು ಕಾರ್ಯಕ್ರಮದಲ್ಲಿ ಸದಾನಂದ ಮಾವಜಿ ಮಾತನಾಡಿದರು. ಧನಂಜಯ ಅಡ್ಪಂಗಾಯ, ಪ್ರಸನ್ನ ನಿಡ್ಯಮಲೆ ಮತ್ತಿತರರು ಇದ್ದರು.
Published on:
Copied
Follow Us
ವಿಜಯವಾಣಿ ಸುದ್ದಿಜಾಲ ಸುಳ್ಯ
ಅರೆಭಾಷೆಗೆ ಒಂದು ಸಾಂಸ್ಕೃತಿಕ ನೆಲೆಗಟ್ಟನ್ನು ಹಾಕಿ ಕೊಟ್ಟು ವ್ಯಾಕರಣದ ಶಿಸ್ತನ್ನು ರೂಢಿಸಿದವರು ಭಾಷಾ ವಿಜ್ಞಾನಿ ಕೋಡಿ ಕುಶಾಲಪ್ಪ ಗೌಡರು ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ ಹೇಳಿದರು.
ಅರೆಭಾಷೆ ಅಕಾಡೆಮಿ ವತಿಯಿಂದ ದಕ್ಷಿಣ ಕನ್ನಡ ಗೌಡ ವಿದ್ಯಾ ಸಂಘ ಹಾಗೂ ಶ್ರೀ ಶಾರದಾ ಪದವಿ ಪೂರ್ವ ಕಾಲೇಜು ಸುಳ್ಯ ಇದರ ಸಹಯೋಗದಲ್ಲಿ ನಡೆದ ಭಾಷಾ ವಿಜ್ಞಾನಿ ಡಾ.ಕೋಡಿ ಕುಶಾಲಪ್ಪ ಗೌಡರ ನೆನಪು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಅರೆಭಾಷೆಯ ಭಾಷಿಕ ಸ್ವರೂಪ ಹಾಗೂ ವೈಶಿಷ್ಠ್ಯಗಳನ್ನು ವೈಜ್ಞಾನಿಕವಾಗಿ ಅಧ್ಯಯನ ಮಾಡಬೇಕೆಂಬ ದೃಷ್ಟಿಕೋನವನ್ನು ಬೆಳೆಸಿದವರಲ್ಲಿ ಕೋಡಿಯವರು ಪ್ರಮುಖರು ಎಂದು ಹೇಳಿದರು.
ಕಾರ್ಯಕ್ರವನ್ನು ದಕ್ಷಿಣ ಕನ್ನಡ ಗೌಡ ವಿದ್ಯಾ ಸಂಘದ ಅಧ್ಯಕ್ಷ ಧನಂಜಯ ಅಡ್ಪಂಗಾಯ ಉದ್ಘಾಟಿಸಿದರು. ಶಾರದಾ ಕಾಲೇಜಿನ ನಿವೃತ್ತ ಉಪನ್ಯಾಸಕ ಪ್ರಸನ್ನ ನಿಡ್ಯಮಲೆ, ಕಾಲೇಜಿನ ಪ್ರಾಂಶುಪಾಲೆ ಸ್ವರ್ಣಕಲಾ ಮಾತನಾಡಿದರು. ಸಾಹಿತಿ ಸಂಜೀವ ಕುದ್ಪಾಜೆ,ನಿವೃತ್ತ ಉಪನ್ಯಾಸಕ ಡಾ.ಎನ್.ವಿ. ಕರುಣಾಕರ ಉಪನ್ಯಾಸ ನೀಡಿದರು.
ಕಾರ್ಯಕ್ರಮದ ಸದಸ್ಯ ಸಂಚಾಲಕ ಗೋಪಾಲ ಪೆರಾಜೆ ಸ್ವಾಗತಿಸಿದರು. ಅಕಾಡೆಮಿಯ ಸದಸ್ಯೆ ಚಂದ್ರಾವತಿ ಬಡ್ಡಡ್ಕ ವಂದಿಸಿದರು.ಸದಸ್ಯರಾದ ಚಂದ್ರಶೇಖರ ಪೇರಾಲು, ಡಾ.ಎನ್.ಎ. ಜ್ಞಾನೇಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪತ್ರಕರ್ತೆ ಪೂಜಾಶ್ರೀ ವಿತೇಶ್ ಕೋಡಿ ನಿರೂಪಿಸಿದರು.