ತಂತ್ರಜ್ಞಾನ ಪ್ರಗತಿಯಿಂದ ಬದುಕು ಜಟಿಲ

 ಕಲ್ಲಾಪುವಿನಲ್ಲಿ ಶಿಕ್ಷಕರ ದಿನ ಸಭಾ ಕಾರ್ಯಕ್ರಮವನ್ನು ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಉದ್ಘಾಟಿಸಿದರು. ಸರ್ಕಾರಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯದ ಉಪನಿರ್ದೇಶಕ ಪ್ರಸನ್ನ ಕುಮಾರ್ ಎಸ್.ಎಲ್., ಪ್ರಾಥಮಿಕ ಶಾಲಾ ಶಿಕ್ಷಣ ಇಲಾಖೆಯ ನಿವೃತ್ತ ನಿರ್ದೇಶಕ ಆನಂದ್ ಇನ್ನಿತರರು ಉಪಸ್ಥಿತರಿದ್ದರು.
ಕಲ್ಲಾಪುವಿನಲ್ಲಿ ಶಿಕ್ಷಕರ ದಿನ ಸಭಾ ಕಾರ್ಯಕ್ರಮವನ್ನು ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಉದ್ಘಾಟಿಸಿದರು. ಸರ್ಕಾರಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯದ ಉಪನಿರ್ದೇಶಕ ಪ್ರಸನ್ನ ಕುಮಾರ್ ಎಸ್.ಎಲ್., ಪ್ರಾಥಮಿಕ ಶಾಲಾ ಶಿಕ್ಷಣ ಇಲಾಖೆಯ ನಿವೃತ್ತ ನಿರ್ದೇಶಕ ಆನಂದ್ ಇನ್ನಿತರರು ಉಪಸ್ಥಿತರಿದ್ದರು.
Published on
ವಿಜಯವಾಣಿ ಸುದ್ದಿಜಾಲ ಉಳ್ಳಾಲ
ತಾಂತ್ರಿಕ, ವೈಜ್ಞಾನಿಕ ಬದಲಾವಣೆಯಿಂದ ನಾವು ಹೆಚ್ಚು ಸಂತೋಷ, ಸುಃಖ, ನೆಮ್ಮದಿ ಕಾಣಬಹುದು ಎನ್ನುವ ಭಾವನೆ ಇತ್ತು. ಆದರೆ ತಂತ್ರಜ್ಞಾನ ಪ್ರಗತಿಯಿಂದ ನಮ್ಮ ಬದುಕು ಮತ್ತಷ್ಟು ಜಟಿಲವಾಗುತ್ತಿದ್ದು ಶಿಕ್ಷಕರೂ ಇದರಿಂದ ಹೊರತಾಗಿಲ್ಲ ಎಂದು ಸರ್ಕಾರಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯದ ಉಪನಿರ್ದೇಶಕ ಪ್ರಸನ್ನ ಕುಮಾರ್ ಎಸ್.ಎಲ್. ಹೇಳಿದರು.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಶಾಲಾ ಶಿಕ್ಷಣ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಮಂಗಳೂರು ದಕ್ಷಿಣ ವಲಯ ಶಿಕ್ಷಕರ ದಿನಾಚರಣೆ ಸಮಿತಿ ಹಾಗೂ ಶಿಕ್ಷಕರ ಕಲ್ಯಾಣ ನಿಧಿ ಬೆಂಗಳೂರು ಸಂಯುಕ್ತ ಆಶ್ರಯದಲ್ಲಿ ಶನಿವಾರ ಕಲ್ಲಾಪುವಿನಲ್ಲಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನ ಮತ್ತು ಶಿಕ್ಷಕರ ದಿನದ ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಮಾಡಿದರು.
ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಮಳಲಿ ಸರ್ಕಾರಿ ಪ್ರೌಢಶಾಲೆ ಸಹಶಿಕ್ಷಕ ಎಂ.ಎಸ್.ಮಹೇಶ್, ರಾಜ್ಯ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಜಗದೀಶ್ ಶೆಟ್ಟಿ ಅಂಬ್ಲಮೊಗರು, ಮಂಗಳೂರು ದಕ್ಷಿಣ ವಲಯ ನಿಕಟಪೂರ್ವ ಶಿಕ್ಷಣ ಸಂಯೋಜಕ ಅನ್ನಪೂರ್ಣ ಬುಚ್ಚನ್ ಅವರನ್ನು ಸನ್ಮಾನಿಸಲಾಯಿತು. ನಿವೃತ್ತ 58 ಶಿಕ್ಷಕರನ್ನು ಗೌರವಿಸಲಾಯಿತು.
ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಉದ್ಘಾಟಿಸಿದರು. ಪ್ರಾಥಮಿಕ ಶಾಲಾ ಶಿಕ್ಷಣ ಇಲಾಖೆಯ ನಿವೃತ್ತ ನಿರ್ದೇಶಕ ಆನಂದ್ ಅಧ್ಯಕ್ಷತೆ ವಹಿಸಿದ್ದರು. ಯೂನಿಯನ್ ಬ್ಯಾಂಕ್ ಪ್ರಬಂಧಕಿ ತೇಜಸ್ವಿನಿ, ಅನುದಾನಿತ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಕೆಎಂಕೆ ಮಂಜನಾಡಿ, ಕ್ಷೇತ್ರ ಸಮನ್ವಯಾಧಿಕಾರಿ ಸುಷ್ಮಾ, ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಗೌರವಾಧ್ಯಕ್ಷ ಜಗದೀಶ್ ಶೆಟ್ಟಿ, ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷೆ ಜಯವಂತಿ ಸೋನ್ಸ್, ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷೆ ಪ್ರಮೀಳಾ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ರಾಧಾಕೃಷ್ಣ ರಾವ್, ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷ ಲಿಂಗರಾಜ್, ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಜಯಶ್ರೀ, ಕ್ಷೇತ್ರ ಶಿಕ್ಷಣ ಸಂಯೋಜಕ ವಿಶ್ವನಾಥ್ ಉಪಸ್ಥಿತರಿದ್ದರು.
ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಆರ್.ಈಶ್ವರ್ ಸ್ವಾಗತಿಸಿದರು. ಬಿಆರ್‌ಪಿ ತಹಸೀನ ಸನ್ಮಾನಪತ್ರ ವಾಚಿಸಿದರು. ಪ್ರಭಾರ ಸಮನ್ವಯಾಧಿಕಾರಿ ಸುಷ್ಮಾ ವಿ.ಕಿಣಿ ವಂದಿಸಿದರು. ಶಿಕ್ಷಕರಾದ ಚಿತ್ರಕಲಾ ಶಿಕ್ಷಕರ ಸಂಘದ ಅಧ್ಯಕ್ಷ ರಫೀಕ್ ತುಂಬೆ ನಿರೂಪಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net