10ರಂದು ಎಂ. ದೇವದಾಸ್ ನುಡಿ ನಮನ

,
,
Published on

ಪ್ರಮುಖ ಮುಖ್ಯಾಂಶಗಳು

  • .
ಮಂಗಳೂರು: ಸಂಘಟಕ, ದಲಿತ ಪರ ಹೋರಾಟಗಾರ ಎಂ. ದೇವದಾಸ್ ಅವರು ನಿಧನರಾಗಿರುವ ಹಿನ್ನೆಲೆಯಲ್ಲಿ ಅವರ ನುಡಿ ನಮನ ಕಾರ್ಯಕ್ರಮವು ಉರ್ವಸ್ಟೋರ್‌ನಲ್ಲಿರುವ ಅಂಬೇಡ್ಕರ್ ಭವನದಲ್ಲಿ ಆ. 10ರಂದು ನಡೆಯಲಿದೆ ಎಂದು ದಸಂಸ (ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ) ದ.ಕ. ಜಿಲ್ಲಾ ಸಂಚಾಲಕ ಸದಾಶಿವ ಪಡುಬಿದ್ರಿ ಅವರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಸೋಮವಾರ ಬೆಳಿಗ್ಗೆ 10.30ಕ್ಕೆ ಮಾಜಿ ಸಚಿವ ರಮಾನಾಥ ರೈ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ದಸಂಸ ರಾಜ್ಯ ಸಂಚಾಲಕ ಎಂ. ಸೋಮಶೇಖರ್ ಹಾಸನ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.
ಎಂ. ದೇವದಾಸ್ ಅವರ ಹೋರಾಟದ ಒಡನಾಡಿಗಳು, ಸ್ನೇಹಿತರು, ಹಿತೈಷಿಗಳು ಮತ್ತು ಸಂಘಟನೆಗಳವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬಹುದು ಎಂದವರು ತಿಳಿಸಿದರು.
ದಸಂಸ (ಪ್ರೊ. ಕೃಷ್ಣಪ್ಪ ಸ್ಥಾಪಿತ) ಜಿಲ್ಲಾ ಮಹಿಳಾ ಸಂಚಾಲಕಿ ಸರೋಜಿನಿ ಬಂಟವಾಳ, ಸಂಘಟನಾ ಸಂಚಾಲಕರುಗಳಾದ ರಾಜಯ್ಯ, ಕೃಷ್ಣಾನಂದ ಡಿ., ರಘು ಕೆ. ಎಕ್ಕಾರು, ಬಾಬು ಕುಂದರ್ ಅವರು ಸುದ್ದಿಗೋಷ್ಠಿಯಲ್ಲಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net