ಮಂಗಳೂರು ಶಿಕ್ಷೆಗೆ ಗುರಿಯಾಗಿದ್ದಾತ ಬಂಧನ

ಮೊಹಮ್ಮದ್ ಮುಸ್ತಾಫ
ಮೊಹಮ್ಮದ್ ಮುಸ್ತಾಫ
Published on: 

ಮಂಗಳೂರು: ನ್ಯಾಯಾಲಯದಿಂದ ದಸ್ತಗಿರಿ ವಾರಂಟ್ ಹೊರಡಿಸಲಾಗಿದ್ದ ಶಿಕ್ಷೆಗೆ ಗುರಿಯಾಗಿದ್ದ ವ್ಯಕ್ತಿಯನ್ನು ಮಂಗಳೂರು ಗ್ರಾಮಾಂತರ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಪುತ್ತೂರು ತಾಲೂಕಿನ ಮೊಹಮ್ಮದ್ ಮುಸ್ತಾಫ (36) ಶಿಕ್ಷೆಗೆ ಗುರಿಯಾಗಿದ್ದ.

ಪ್ರಕರಣದ ಶಿಕ್ಷಾ ಆದೇಶದ ವಿರುದ್ಧ ಆತ ಕರ್ನಾಟಕ ಹೈಕೋರ್ಟ್, ಬೆಂಗಳೂರಿನಲ್ಲಿ ಕ್ರಿಮಿನಲ್ ಅಪೀಲ್ ನಂ. 602/2015 ಸಲ್ಲಿಸಿದ್ದರು. ಆದರೆ ಮೇಲ್ಮನವಿ ವಿಚಾರಣೆಗೆ ಹಾಜರಾಗದೆ ಇದ್ದ ಹಿನ್ನೆಲೆಯಲ್ಲಿ ಹೈಕೋರ್ಟ್ ಆತನ ವಿರುದ್ಧ ದಸ್ತಗಿರಿ ವಾರಂಟ್ ಹೊರಡಿಸಿತ್ತು.

ಈ ಹಿನ್ನೆಲೆಯಲ್ಲಿ ಅ.6ರಂದು ಬೆಳಗ್ಗೆ ಆರೋಪಿಯ ಪ್ರಸ್ತುತ ವಿಳಾಸವಾದ ಪುತ್ತೂರು ತಾಲೂಕಿನ 34ನೇ ನೆಕ್ಕಿಲಾಡಿ ಗ್ರಾಮದ ಸುಭಾಷ್ ನಗರದಲ್ಲಿರುವ ಮನೆಯನ್ನು ಪತ್ತೆಹಚ್ಚಿದ ಪೊಲೀಸರು ಆತನನ್ನು ಬಂಧಿಸಿದರು. ಬಳಿಕ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

ಮಂಗಳೂರು ದಕ್ಷಿಣ ವಿಭಾಗದ ಎಸಿಪಿ ವಿಜಯ ಕ್ರಾಂತಿ ಅವರ ನಿರ್ದೇಶನದಲ್ಲಿ, ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಡಿ.ಆರ್. ಮಂಜಪ್ಪ ಅವರ ನೇತೃತ್ವದಲ್ಲಿ ಪಿಎಸ್‌ಐ ಅರುಣ್ ಕುಮಾರ್ ಡಿ. ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು. ಉಪ್ಪಿನಂಗಡಿ ಪೊಲೀಸ್ ಠಾಣೆಯ ಸಿಬ್ಬಂದಿಯೂ ಕಾರ್ಯಾಚರಣೆಗೆ ಸಹಕರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net