ಮಂಗಳೂರು 13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಹಸನ್ ಶಬೀರ್
ಹಸನ್ ಶಬೀರ್
Published on: 

ಮಂಗಳೂರು: ವರದಕ್ಷಿಣೆ ಪ್ರಕರಣದಲ್ಲಿ ಆರೋಪಿಯಾಗಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ಹದಿಮೂರು ವರ್ಷಗಳಿಂದ ತಲೆಮರೆಸಿಕೊಂಡಿದ್ದಾತನನ್ನು ಪೊಲೀಸರು ಬಂಧಿಸಿದ್ದಾರೆ.

ಅತ್ತಾವರದ ಹಸನ್ ಶಬೀರ್ ಪ್ರಾಯ (41) ಬಂಧಿತ ಆರೋಪಿ. ಈತನ ವಿರುದ್ಧ 2013ರಲ್ಲಿ ಮಹಿಳಾ ಠಾಣೆಯಲ್ಲಿ ವರದಕ್ಷಿಣೆ ವಿರೋಧಿ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಮೂರನೇ ಜೆಎಂಎಫ್ ಸಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ದೀರ್ಘಕಾಲದಿಂದ ಬಾಕಿ ಉಳಿದಿರುವ ಪ್ರಕರಣವಾಗಿ ಪರಿವರ್ತನೆ ಯಾಗಿತ್ತು. ಆರೋಪಿಯ ಹಾಜರಾತಿಗಾಗಿ ನ್ಯಾಯಾಲಯ ಸುಮಾರು 37 ಬಾರಿ ವಾರಂಟ್ ಹೊರಡಿಸಿದ್ದರೂ, 13 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ, ವಿಳಾಸ ಬದಲಿಸಿ, ತಲೆ ಮರೆಸಿಕೊಂಡಿದ್ದ.

ಅ.9ರಂದು ಆರೋಪಿಯನ್ನು ಪುತ್ತೂರಿನ ಅಪಾರ್ಟ್ ಮೆಂಟ್ ಒಂದರಲ್ಲಿ ವಶಕ್ಕೆ ಪಡೆಯಲಾಗಿದ್ದು, ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಬಳಿಕ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಲಯ ಆರೋಪಿಗೆ ಅ.17ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಮೇಲಾಧಿಕಾರಿಗಳ ಮಾರ್ಗದರ್ಶನದಲ್ಲಿ ಮಹಿಳಾ ಪೊಲೀಸ್ ಠಾಣೆಯ ಮಹಿಳಾ ಪಿಐ ಜ್ಯೋತಿ ಮತ್ತು ಪಿಎಸ್‌ಐ ಸುರೇಶ್, ಸಿಬಂದಿಯವರಾದ ಶಶಿಧರ ಶೆಟ್ಟರ್ ಹಾಗೂ ಶಶಿಧರ್ ದೊಡ್ಡಮನಿ ಆರೋಪಿಯ ಪತ್ತೆ ಕಾರ್ಯಾಚರಣೆ ನಡೆಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net