ಮಾಹಿತಿದಾರರ ಕಷ್ಟಕ್ಕೆ ಸ್ಪಂದಿಸುವ ಮನೋಭಾವದವರು : ಆನಂದ ಶೆಟ್ಟಿ ಬಣ್ಣನೆ

 ಹಿರಿಯ ಪತ್ರಕರ್ತರಾದ ಆನಂದ ಶೆಟ್ಟಿ, ವಿದ್ಯಾಧರ ಶೆಟ್ಟಿ, ಛಾಯಾಗ್ರಾಹಕ ಅಶೋಕ್ ಉಳ್ಳಾಲ್ ಹಾಗೂ ಕ್ರೀಡಾ ಕ್ಷೇತ್ರದ ಸಾಧನೆಗಾಗಿ ಉಳ್ಳಾಲ ನಗರಸಭೆಯ ಸದಸ್ಯೆ ಗೀತಾ ಬಾಯಿ ಅವರನ್ನು ಸನ್ಮಾನಿಸಲಾಯಿತು.
ಹಿರಿಯ ಪತ್ರಕರ್ತರಾದ ಆನಂದ ಶೆಟ್ಟಿ, ವಿದ್ಯಾಧರ ಶೆಟ್ಟಿ, ಛಾಯಾಗ್ರಾಹಕ ಅಶೋಕ್ ಉಳ್ಳಾಲ್ ಹಾಗೂ ಕ್ರೀಡಾ ಕ್ಷೇತ್ರದ ಸಾಧನೆಗಾಗಿ ಉಳ್ಳಾಲ ನಗರಸಭೆಯ ಸದಸ್ಯೆ ಗೀತಾ ಬಾಯಿ ಅವರನ್ನು ಸನ್ಮಾನಿಸಲಾಯಿತು.
Published on

ಉಳ್ಳಾಲ: ಅತಿಹೆಚ್ಚಿನ ಜನರ ಸಂಪರ್ಕದಲ್ಲಿದ್ದ ಮನೋಹರ್ ಪ್ರಸಾದ್ ಮಾಹಿತಿದಾರರ ಕಷ್ಟ, ಕಾರ್ಪಣ್ಯಗಳಿಗೂ ಸ್ಪಂದಿಸುವ ಮನೋಭಾವ ಹೊಂದಿದ್ದರು. ಇನ್ನೊಬ್ಬರಿಗೆ ನೋವಾಗದಂತೆ ತನ್ನನ್ನೇ ಹಾಸ್ಯದ ವಸ್ತುವನ್ನಾಗಿ ಬಿಂಬಿಸಿ ಸಭಿಕರನ್ನು ನಗಿಸುತ್ತಿದ್ದರು ಎಂದು ಹಿರಿಯ ಪತ್ರಕರ್ತ ಆನಂದ ಶೆಟ್ಟಿ ಹೇಳಿದರು.

ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿಯಿಂದ ಕುತ್ತಾರ್ ಖಾಸಗಿ ಸಭಾಂಗಣದಲ್ಲಿ ಶನಿವಾರ ಕನ್ನಡ ರಾಜ್ಯೋತ್ಸವ, ಪತ್ರಕರ್ತ ದಿ.ಮನೋಹರ ಪ್ರಸಾದ್ ಸಂಸ್ಮರಣೆ ಹಾಗೂ ಗೌರವ ಸನ್ಮಾನ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ಜಾನಪದ ಸಂಸ್ಕೃತಿ ಚಿಂತಕ ಕದ್ರಿ ನವನೀತ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ಹಿರಿಯ ಪತ್ರಕರ್ತರಾದ ಆನಂದ ಶೆಟ್ಟಿ, ವಿದ್ಯಾಧರ ಶೆಟ್ಟಿ, ಛಾಯಾಗ್ರಾಹಕ ಅಶೋಕ್ ಉಳ್ಳಾಲ್ ಹಾಗೂ ಕ್ರೀಡಾ ಕ್ಷೇತ್ರದ ಸಾಧನೆಗಾಗಿ ಉಳ್ಳಾಲ ನಗರಸಭೆ ಸದಸ್ಯೆ ಗೀತಾ ಬಾಯಿ ಅವರನ್ನು ಸನ್ಮಾನಿಸಲಾಯಿತು. ಮಾಜಿ ಶಾಸಕ ಕೆ.ಜಯರಾಮ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಉಳ್ಳಾಲ ತಾಲೂಕು ಘಟಕದ ಅಧ್ಯಕ್ಷ ವಸಂತ್ ಎನ್.ಕೊಣಾಜೆ, ಪರಿಸರ ಪ್ರೇಮಿ ಮಾಧವ ಉಳ್ಳಾಲ್, ಉಳ್ಳಾಲ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಅಧ್ಯಕ್ಷ ರಾಜೇಶ್ ಉಳ್ಳಾಲ್, ಮಾಜಿ ಅಧ್ಯಕ್ಷ ಚಿದಾನಂದ, ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ಪದಾಧಿಕಾರಿಗಳಾದ ಸದಾನಂದ ಬಂಗೇರ, ಯು.ಪಿ.ಆಲಿಯಬ್ಬ, ವಾಣಿ ಲೋಕಯ್ಯ, ಶಶಿಕಾಂತಿ ಉಳ್ಳಾಲ್, ವಾಣಿ ಗೌಡ ಉಳ್ಳಾಲಬೈಲ್, ರಾಘವ ಮಾಸ್ಟರ್, ರತ್ನಾವತಿ ಜೆ.ಬೈಕಾಡಿ, ಅನುಪಮ ಸಿ.ಬಬ್ಬುಕಟ್ಟೆ, ನಾಗರತ್ನ, ಲತಾ, ಸತೀಶ್ ಭಂಡಾರಿ, ಸರೋಜ, ಜಯಶ್ರೀ ಕೆ., ಶಶಿಕಲಾ ಗಟ್ಟಿ, ಜಯಲಕ್ಷ್ಮೀ ಮೊದಲಾದವರು ಉಪಸ್ಥಿತರಿದ್ದರು.

ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ಅಧ್ಯಕ್ಷ ದಿನಕರ ಉಳ್ಳಾಲ್ ಸ್ವಾಗತಿಸಿದರು. ಮಾಧವಿ ಉಳ್ಳಾಲ್ ಸನ್ಮಾನಿತರನ್ನು ಪರಿಚಯಿಸಿದರು. ಸ್ವಪ್ನ ಶೆಟ್ಟಿ ವಂದಿಸಿದರು. ಧನಲಕ್ಷ್ಮೀ ಗಟ್ಟಿ ಮತ್ತು ಕೆಎಂಕೆ ಮಂಜನಾಡಿ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net