ತಂತ್ರಜ್ಞಾನ ಜವಾಬ್ದಾರಿಯುತ ಬಳಕೆಯಿಂದ ಮಾಧ್ಯಮ ಪಾರದರ್ಶಕ

ಎಸ್.ಡಿ.ಎಂ ಎಜ್ಯುಕೇಶನಲ್ ಸೊಸೈಟಿಯ ಮಾಹಿತಿ ತಂತ್ರಜ್ಞಾನ ಮತ್ತು ಹಾಸ್ಟೆಲ್ ಆಡಳಿತಾತ್ಮಕ ಸಿಇಒ ಪೂರನ್ ವರ್ಮ ಕಾರ್ಯಕ್ರಮ ಉದ್ಘಾಟಿಸಿದರು. ವಿಭಾಗದ ನಿಕಟಪೂರ್ವ ಮುಖ್ಯಸ್ಥ ಡಾ.ಭಾಸ್ಕರ ಹೆಗಡೆ, ಡಾ.ಸೌಮ್ಯ ಬಿ.ಪಿ. ಮೊದಲಾದವರಿದ್ದರು.
ಎಸ್.ಡಿ.ಎಂ ಎಜ್ಯುಕೇಶನಲ್ ಸೊಸೈಟಿಯ ಮಾಹಿತಿ ತಂತ್ರಜ್ಞಾನ ಮತ್ತು ಹಾಸ್ಟೆಲ್ ಆಡಳಿತಾತ್ಮಕ ಸಿಇಒ ಪೂರನ್ ವರ್ಮ ಕಾರ್ಯಕ್ರಮ ಉದ್ಘಾಟಿಸಿದರು. ವಿಭಾಗದ ನಿಕಟಪೂರ್ವ ಮುಖ್ಯಸ್ಥ ಡಾ.ಭಾಸ್ಕರ ಹೆಗಡೆ, ಡಾ.ಸೌಮ್ಯ ಬಿ.ಪಿ. ಮೊದಲಾದವರಿದ್ದರು.
Published on
ಬೆಳ್ತಂಗಡಿ: ಕೃತಕ ಬುದ್ಧಿಮತ್ತೆ ಸೇರಿದಂತೆ ಮುಂಬರುವ ಯಾವುದೇ ನೂತನ ತಾಂತ್ರಿಕ ಆವಿಷ್ಕಾರಗಳನ್ನು ನಿಖರತೆ, ಬದ್ಧತೆ ಮತ್ತು ಎಚ್ಚರದ ಹೊಣೆಗಾರಿಕೆಯೊಂದಿಗೆ ಅನ್ವಯಿಸಿಕೊಂಡಾಗ ಮಾತ್ರ ಸಮೂಹ ಮಾಧ್ಯಮಗಳಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲು ಸಾಧ್ಯವಾಗುತ್ತದೆ ಎಂದು ಎಸ್‌ಡಿಎಂ ಎಜುಕೇಶನಲ್ ಸೊಸೈಟಿಯ ಮಾಹಿತಿ ತಂತ್ರಜ್ಞಾನ ಮತ್ತು ಹಾಸ್ಟೆಲ್ ಆಡಳಿತಾತ್ಮಕ ಸಿಇಒ ಪೂರನ್ ವರ್ಮ ಹೇಳಿದರು.
ಉಜಿರೆಯ ಎಸ್‌ಡಿಎಂ ಸ್ನಾತಕೋತ್ತರ ಕೇಂದ್ರದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ನೂತನ ಶೈಕ್ಷಣಿಕ ಕಾರ್ಯಚಟುವಟಿಕೆಗಳ ಉದ್ಘಾಟನಾ ಪ್ರಯುಕ್ತ ಆಯೋಜಿಸಲಾಗಿದ್ದ ದಿಕ್ಸೂಚಿ ಕಾರ್ಯಕ್ರಮದಲ್ಲಿ ಮೀಡಿಯಾ ಮೆಸೆಂಜರ್ ಕ್ಲಬ್‌ಗೆ ಚಾಲನೆ ನೀಡಿ ಮಾತನಾಡಿದರು.
ವಿಭಾಗದ ನಿಕಟಪೂರ್ವ ಮುಖ್ಯಸ್ಥ ಡಾ.ಭಾಸ್ಕರ ಹೆಗಡೆ ಮಾತನಾಡಿ, 2008ರಿಂದ ವಿಭಾಗವು ಬೆಳೆದುಬಂದ ಹಾದಿಯನ್ನು ಮೆಲುಕು ಹಾಕಿದರು. ಜ್ಞಾನ ಮತ್ತು ಕೌಶಲಗಳನ್ನು ಅನ್ವಯಿಸಿಕೊಂಡು ಸಾಧಿಸುವ ವಿದ್ಯಾರ್ಥಿಗಳ ಮಹತ್ವಾಕಾಂಕ್ಷೆಯೇ ವಿಭಾಗದ ಯಶಸ್ಸಿಗೆ ಕಾರಣ ಎಂದರು.
ವಿದ್ಯಾರ್ಥಿಗಳ ಬರಹಗಳನ್ನೊಳಗೊಂಡ ಹೊಂಗಿರಣ ಕೃತಿ ಹಾಗೂ ಎಸ್‌ಡಿಎಂ ಗೆಜೆಟ್ ವಿಶೇಷ ಸಂಚಿಕೆಯನ್ನು ಬಿಡುಗಡೆಗೊಳಿಸಲಾಯಿತು. ಎಸ್‌ಡಿಎಂ ಸ್ನಾತಕೋತ್ತರ ಕೇಂದ್ರದ ಡೀನ್ ಡಾ.ಸೌಮ್ಯಾ ಬಿ.ಪಿ. ಉಪಸ್ಥಿತರಿದ್ದರು. ವಿಭಾಗದ ಮುಖ್ಯಸ್ಥ ಡಾ.ಹಂಪೇಶ್ ಕೆ.ಎಸ್. ಪ್ರಾಸ್ತಾವಿಕವಾಗಿ ಮಾತನಾಡಿದರು. ಸುಜನಾ ಕಾರ್ಯಕ್ರಮ ನಿರೂಪಿಸಿದರು. ಅಕ್ಷತಾ ಆಚಾರ್ ವಂದಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net