ವೃತ್ತಿ ಕೌಶಲ ವೃದ್ಧಿಗೆ ಆಧುನಿಕ ತಂತ್ರಜ್ಞಾನ ಪೂರಕ

ಕುಶಲಕರ್ಮಿಗಳಿಗೆ ಸುಧಾರಿತ ಉಪಕರಣ ವಿತರಣೆ
ವೃತ್ತಿಪರ ಕುಶಲಕರ್ಮಿಗಳಿಗೆ ಸುಧಾರಿತ ಉಪಕರಣಗಳನ್ನು ಶಾಸಕ ರಾಜೇಶ್ ನಾಕ್ ವಿತರಿಸಿದರು. ಜಯಂತಿ ಪೂಜಾರಿ, ಮಂಜುನಾಥ್ ಹೆಗಡೆ ಮತ್ತಿತರರು ಇದ್ದರು.
ವೃತ್ತಿಪರ ಕುಶಲಕರ್ಮಿಗಳಿಗೆ ಸುಧಾರಿತ ಉಪಕರಣಗಳನ್ನು ಶಾಸಕ ರಾಜೇಶ್ ನಾಕ್ ವಿತರಿಸಿದರು. ಜಯಂತಿ ಪೂಜಾರಿ, ಮಂಜುನಾಥ್ ಹೆಗಡೆ ಮತ್ತಿತರರು ಇದ್ದರು.
Published on: 

ಬಂಟ್ವಾಳ: ಗ್ರಾಮೀಣ ಪ್ರದೇಶದ ಕುಶಲಕರ್ಮಿಗಳಿಗೆ ಆಧುನಿಕ ತಂತ್ರಜ್ಞಾನದ ಉಪಕರಣಗಳನ್ನು ಒದಗಿಸುವುದರಿಂದ ಅವರ ವೃತ್ತಿ ಕೌಶಲ ವೃದ್ಧಿಯಾಗುವುದರ ಜತೆಗೆ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ನೆರವಾಗಲಿದೆ ಎಂದು ಶಾಸಕ ರಾಜೇಶ್ ನಾಕ್ ಹೇಳಿದರು.

ಬಂಟ್ವಾಳ ಶಾಸಕರ ಕಚೇರಿಯಲ್ಲಿ ಮಂಗಳವಾರ, ಮಂಗಳೂರಿನ ಯೆಯ್ಯಡಿಯ ಜಿಲ್ಲಾ ಪಂಚಾಯಿತಿ ಕೈಗಾರಿಕಾ ವಿಭಾಗದ ವತಿಯಿಂದ 2025-26ನೇ ಸಾಲಿನ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತವಾಗಿ ಸುಧಾರಿತ ಉಪಕರಣ ಹಾಗೂ ತರಬೇತಿ ಪಡೆದ ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಗ್ರಾಮೀಣ ಭಾಗದಲ್ಲಿ ಗಾರೆ ಕೆಲಸ, ಬಡಗಿ, ಕವ್ಮಾರಿಕೆ, ವಿದ್ಯುತ್ ಕೆಲಸ ಸೇರಿದಂತೆ ವಿವಿಧ ವೃತ್ತಿಗಳಲ್ಲಿ ತೊಡಗಿಸಿಕೊಂಡಿರುವ ಕುಶಲಕರ್ಮಿಗಳು ಸವಾಜದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಅವರಿಗೆ ಅಗತ್ಯ ಉಪಕರಣಗಳನ್ನು ಒದಗಿಸಿದಾಗ ಕೆಲಸದ ಗುಣಮಟ್ಟ ಹೆಚ್ಚಿಸಲು ಮತ್ತು ಆದಾಯ ವೃದ್ಧಿಸಿಕೊಳ್ಳಲು ಸಹಕಾರಿಯಾಗಲಿದೆ. ಮಹಿಳೆಯರು ಹೊಲಿಗೆ ತರಬೇತಿ ಪಡೆದು ಸ್ವಂತ ಉದ್ಯೋಗ ಆರಂಭಿಸುವ ಮೂಲಕ ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು ಎಂದರು.

ಬಂಟ್ವಾಳ ತಾಲೂಕಿನ ವಿವಿಧ ವೃತ್ತಿಗಳಲ್ಲಿ ತೊಡಗಿಸಿಕೊಂಡಿರುವ ಕುಶಲಕರ್ಮಿಗಳು ಹಾಗೂ ತರಬೇತಿ ಪಡೆದ ಮಹಿಳೆಯರಿಗೆ ಯೋಜನೆಯಡಿ ಒಟ್ಟು 262 ವಿವಿಧ ಉಪಕರಣಗಳು, ಹೊಲಿಗೆ ಯಂತ್ರ ವಿತರಿಸಲಾಯಿತು.

ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷೆ ಜಯಂತಿ ಪೂಜಾರಿ, ಗ್ರಾಮೀಣ ಕೈಗಾರಿಕಾ ಇಲಾಖೆ ಉಪನಿರ್ದೇಶಕ ಮಂಜುನಾಥ್ ಹೆಗಡೆ, ಕೈಗಾರಿಕಾ ವಿಭಾಗದ ಅಧಿಕಾರಿಗಳು ಹಾಗೂ ಫಲಾನುಭವಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net