ಸಂಸದ ಕ್ಯಾ.ಬ್ರಿಜೇಶ್ ಚೌಟ ಸಾರ್ವಜನಿಕರ ಅಹವಾಲು ಸ್ವೀಕಾರ

ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು  ಸಾರ್ವಜನಿಕರ ಕುಂದು-ಕೊರತೆ ಆಲಿಸಿದರು.
ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಸಾರ್ವಜನಿಕರ ಕುಂದು-ಕೊರತೆ ಆಲಿಸಿದರು.
Published on
ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಯಲ್ಲಿ ಮಂಗಳವಾರ ಸಾರ್ವಜನಿಕರ ಕುಂದು-ಕೊರತೆ ಆಲಿಸಿದರು. ಈ ವೇಳೆ ಜಿಲ್ಲೆಯ ವಿವಿಧ ಕಡೆಗಳಿಂದ ಆಗಮಿಸಿದ್ದ ಸಾರ್ವಜನಿಕರು ತಮ್ಮ ಸಮಸ್ಯೆ ಹಾಗೂ ಬೇಡಿಕೆಗಳ ಕುರಿತು ಅಹವಾಲು ಸಲ್ಲಿಸಿದ್ದಾರೆ.
ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಬೆಳ್ತಂಗಡಿ, ಸುಳ್ಯ ಮುಂತಾದ ಪ್ರದೇಶಗಳಿಂದ ಬಂದಿದ್ದ ಕೃಷಿಕರು ಎದುರಿಸುತ್ತಿರುವ ಅಡ್ಡಿ-ಆತಂಕವನ್ನು ಸಂಸದರ ಮುಂದೆ ತೋಡಿಕೊಂಡರು. ಇದಕ್ಕೆ ಸಂಸದರು ಸೂಕ್ತ ಮಾರ್ಗದರ್ಶನ ಮತ್ತು ಪರಿಹಾರ ನೀಡಿದರು.
ಸಾರ್ವಜನಿಕ ಭೇಟಿ ವೇಳೆ, ರೈಲ್ವೆ ಇಲಾಖೆ, ಹೆದ್ದಾರಿ ಇಲಾಖೆ ಸೇರಿದಂತೆ ಜಿಲ್ಲೆಯಲ್ಲಿ ನಡೆಯುತ್ತಿರುವ ಹಲವಾರು ಅಭಿವೃದ್ಧಿ ಕಾಮಗಾರಿಗೆ ಸಂಬಂಧಿಸಿದ ಕೆಲವು ಸಮಸ್ಯೆ-ಬೇಡಿಕೆಗಳ ಬಗ್ಗೆಯೂ ಜನರು ಸಂಸದರ ಗಮನಕ್ಕೆ ತಂದಿದ್ದಾರೆ. ಇನ್ನು ಕೆಲವೊಂದು ಸಮಸ್ಯೆಗಳನ್ನು ಆಲಿಸಿದ ಸಂಸದ ಕ್ಯಾ. ಚೌಟ ಅವರು ಸ್ಥಳದಲ್ಲೇ ಪರಿಹಾರ ಒದಗಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net