ಶಿಕ್ಷಣದೊಂದಿಗೆ ಪಠ್ಯೇತರ ಚಟುವಟಿಕೆಯಲ್ಲಿ ಸಾಧನೆ : ಉಮಾನಾಥ ಕೋಟ್ಯಾನ್ ಅನಿಸಿಕೆ

ಹಳೆಯಂಗಡಿ ಶ್ರೀ ನಾರಾಯಣ ಸನಿಲ್ ಪದವಿ ಪೂರ್ವ ಕಾಲೇಜಿನ ಪ್ರತಿಭಾ ಪುರಸ್ಕಾರ ಹಾಗೂ ಕಾಲೇಜು ವಾರ್ಷಿಕೋತ್ಸವ ಸಮಾರಂಭ ನಡೆಯಿತು.
ಹಳೆಯಂಗಡಿ ಶ್ರೀ ನಾರಾಯಣ ಸನಿಲ್ ಪದವಿ ಪೂರ್ವ ಕಾಲೇಜಿನ ಪ್ರತಿಭಾ ಪುರಸ್ಕಾರ ಹಾಗೂ ಕಾಲೇಜು ವಾರ್ಷಿಕೋತ್ಸವ ಸಮಾರಂಭ ನಡೆಯಿತು.
Published on

ಹಳೆಯಂಗಡಿ: ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸಾಧಕರಾಗಿ ಎಂದು ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು.

ಹಳೆಯಂಗಡಿ ಶ್ರೀ ನಾರಾಯಣ ಸನಿಲ್ ಪದವಿ ಪೂರ್ವ ಕಾಲೇಜಿನ 2025-26ನೇ ಶೈಕ್ಷಣಿಕ ಸಾಲಿನ ಪ್ರತಿಭಾ ಪುರಸ್ಕಾರ ಹಾಗೂ ಕಾಲೇಜು ವಾರ್ಷಿಕೋತ್ಸವ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಹಳೆಯಂಗಡಿ ಗ್ರಾಪಂ ಅಧಕ್ಷೆ ಪೂರ್ಣಿಮಾ ಧ್ವಜಾರೋಹಣ ನೆರವೇರಿಸಿದರು. ನರೇಗಾ ಯೋಜನೆಯಡಿ ನಿರ್ಮಿಸಲಾದ ನೂತನ ಶೌಚಗೃಹವನ್ನು ಉಮಾನಾಥ ಕೋಟ್ಯಾನ್ ಉದ್ಘಾಟಿಸಿದರು.

2024-25ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಪಡೆದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಕಾಲೇಜು ವಾರ್ಷಿಕೋತ್ಸವದ ನಿಮಿತ್ತ ನಡೆದ ಕ್ರೀಡಾ ಚಟುವಟಿಕೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಮುಖ್ಯ ಅತಿಥಿ, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಮೋಹನ್ ಸುವರ್ಣ, ಸಮಿತಿ ವಿದ್ಯಾರ್ಥಿ ಪೋಷಕ ಪ್ರತಿನಿಧಿಗಳಾದ ಹೇಮಲತಾ, ಗೀತಾ, ಕಾಲೇಜು ಪ್ರಾಂಶುಪಾಲೆ ಜಯಶ್ರೀ, ಉಪನ್ಯಾಸಕರಾದ ಶಿವಾನಂದ ಎಲ್.ದೇಸಾಯಿ, ಕವಿತಾ, ಸವಿತಾ, ಮಿಶೆಲ್ ಡಿಸಿಲ್ವ, ಶುಭಲಕ್ಷ್ಮೀ, ದಿನಕರ್, ವಿದ್ಯಾರ್ಥಿ ನಾಯಕರಾದ ಆಸಿಫ್ ಮತ್ತು ಶ್ರೇಯಾ ಉಪಸ್ಥಿತರಿದ್ದರು. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net