ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯದ ಕುಲಪತಿ ಡಾ. ಭಗವಾನ್ ಬಿ.ಸಿ. ಅಧ್ಯಕ್ಷತೆ ವಹಿಸಲಿದ್ದು, ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ಕ್ಯಾ.ಬ್ರಿಜೇಶ್ ಚೌಟ ಧ್ವಜಾರೋಹಣ ನೆರವೇರಿಸಲಿದ್ದಾರೆ. ಶಾಸಕರಾದ ಉಮಾನಾಥ ಎ ಕೋಟ್ಯಾನ್,ಡಾ. ನಿವಾಸ ಎನ್‌ಟಿ,ಎಚ್‌ಸಿ ಬಾಲಕೃಷ್ಣ, ರಿಜ್ವಾನ್ ಅರ್ಷದ್, ದಕ್ಷಿಣ ಕನ್ನಡ ಹಾಗೂ ಉಡುಪಿ ಕ್ಷೇತ್ರದ ಹಾಲಿ ಮತ್ತು ಮಾಜಿ ಸಂಸದರು, ಶಾಸಕರು ಹಾಗೂ ಪರಿಷತ್ ಸದಸ್ಯರು ಉಪಸ್ಥಿತರಿರಲಿದ್ದಾರೆ ಎಂದರು.