ಪ್ರಕೃತಿ ಚಿಕಿತ್ಸೆಯ ವೈಜ್ಞಾನಿಕ ತತ್ವ ಮನನ : ಡಾ.ಗೀತಾ ಬಿ.ಶೆಟ್ಟಿ ಕರೆ

 ಆಳ್ವಾಸ್ ಪ್ರಕೃತಿ ಚಿಕಿತ್ಸಾ ಮತ್ತು ಯೋಗವಿಜ್ಞಾನ ಕಾಲೇಜಿನಲ್ಲಿ ಪ್ರಕೃತಿ ಚಿಕಿತ್ಸಾ ದಿನಾಚರಣೆ ನಡೆಯಿತು.
ಆಳ್ವಾಸ್ ಪ್ರಕೃತಿ ಚಿಕಿತ್ಸಾ ಮತ್ತು ಯೋಗವಿಜ್ಞಾನ ಕಾಲೇಜಿನಲ್ಲಿ ಪ್ರಕೃತಿ ಚಿಕಿತ್ಸಾ ದಿನಾಚರಣೆ ನಡೆಯಿತು.
Published on

ಮೂಡುಬಿದಿರೆ: ಆಳ್ವಾಸ್ ಪ್ರಕೃತಿ ಚಿಕಿತ್ಸಾ ಮತ್ತು ಯೋಗವಿಜ್ಞಾನ ಕಾಲೇಜಿನಲ್ಲಿ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನ ಆಚರಿಸಲಾಯಿತು.

ಎಸ್‌ಡಿಎಂ ಪ್ರಕೃತಿ ಚಿಕಿತ್ಸಾ ಕಾಲೇಜಿನ ಡೀನ್ ಡಾ.ಗೀತಾ ಬಿ.ಶೆಟ್ಟಿ ಮುಖ್ಯ ಅತಿಥಿಯಾಗಿ ಮಾತನಾಡಿ, ಪ್ರಕೃತಿ ಚಿಕಿತ್ಸಾ ದಿನಾಚರಣೆ ಕೇವಲ ಆಚರಣೆಗೆ ಸೀಮಿತವಾಗದೆ, ರೋಗ ನಿವಾರಣೆ ಮತ್ತು ಚಿಕಿತ್ಸೆಯ ನೆಲೆಯಲ್ಲಿ, ಸಮಾಜಕ್ಕೆ ನೈಜ ಪರಿಹಾರ ನೀಡುವಂತಾಗಬೇಕು. ಪ್ರಕೃತಿ ಚಿಕಿತ್ಸೆಯ ವೈಜ್ಞಾನಿಕ ತತ್ವಗಳನ್ನು ಜನಸಾಮಾನ್ಯರಿಗೆ ಸರಳವಾಗಿ ಅರ್ಥವಾಗುವ ರೀತಿಯಲ್ಲಿ ಪರಿಚಯಿಸುವ ಜವಾಬ್ದಾರಿ ನಮ್ಮೆಲ್ಲರದು. ಚಿಕಿತ್ಸೆಯ ಪರಿಣಾಮ ದೃಢಪಡಿಸಲು ವೈಜ್ಞಾನಿಕ ದಾಖಲೆ ಸಂಗ್ರಹ ಅವಶ್ಯಕ ಎಂದರು.

ಆಳ್ವಾಸ್ ಫಾರ್ಮಸಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಗ್ರೀಷ್ಮಾ ವಿವೇಕ್ ಆಳ್ವ ಅಧ್ಯಕ್ಷತೆವಹಿಸಿ, ಪ್ರಕೃತಿ ಚಿಕಿತ್ಸಾ ವಿದ್ಯಾರ್ಥಿಗಳು ಮತ್ತು ವೈದ್ಯರು ಆತ್ಮವಿಶ್ವಾಸ, ಸೇವಾಭಾವದಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಸಲಹೆ ನೀಡಿದರು.

ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಕಾಲೇಜಿನ ಪ್ರಾಂಶುಪಾಲೆ ಡಾ.ವನಿತಾ ಶೆಟ್ಟಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಫಿದಾ ಅಂಜು ನಿರೂಪಿಸಿದರು. ಡಾ.ಆಕಾಶ್ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net