ಈ ಪ್ರಕರಣದ ಆರೋಪಿ ಪತ್ತೆ ಬಗ್ಗೆ ವಿಶೇಷ ತಂಡವನ್ನು ರಚಿಸಿದ್ದು, ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದ ಪೊಲೀಸರು ಡಿ.4ರಂದು ಆರೋಪಿಯ ಬಗ್ಗೆ ವಿಶೇಷ ತಂಡಕ್ಕೆ ದೊರೆತ ಮಾಹಿತಿಯಂತೆ ಕದ್ರಿ ಜೋಗಿ ಮಠದ ಬಳಿ ವಾಹನ ತಪಸಾಣೆ ನಡೆಸುತ್ತಿದ್ದ ಸಮಯ ಸಂಶಯಾಸ್ಪದವಾಗಿ ದ್ವಿಚಕ್ರ ವಾಹನ ಚಲಾಯಿಸಿಕೊಂಡು ಬಂದ ವ್ಯಕ್ತಿಯನ್ನು ನಿಲ್ಲಿಸಿ ಪರಿಶೀಲಿಸಿದಾಗ ಈ ವಾಹನವು ಸುರತ್ಕಲ್ ಠಾಣಾ ವ್ಯಾಪ್ತಿಯಲ್ಲಿ ಕಳವು ಮಾಡಿದ ವಾಹನವೆಂದು ಗೊತ್ತಾಗಿದೆ. ವಿಚಾರಿಸಿದಾಗ ಆರೋಪಿಯು ಕಳ್ಳತನ ಮಾಡಿದ ದ್ವಿ ಚಕ್ರ ವಾಹನವನ್ನು ಬಳಸಿಕೊಂಡು ವಯೋವೃದ್ದರು, ಒಂಟಿ ಮಹಿಳೆಯರನ್ನು ಗುರುತಿಸಿ ಸರಗಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ. ಆರೋಪಿಯನ್ನು ಶುಕ್ರವಾರ ನ್ಯಾಯಾಲಯಕ್ಕೆ ಹಾಜರು ಪಡಿಸಿ, ಮುಂದಿನ ತನಿಖೆಗಾಗಿ 3 ದಿನಗಳ ಕಾಲ ಪೊಲೀಸ್ ವಶಕ್ಕೆ ಪಡೆದುಕೊಳ್ಳಲಾಗಿದೆ.