ಆರೋಗ್ಯ, ಆಯುಷ್ಯ ಒಂದಕ್ಕೊಂದು ಪೂರಕ ODIYOORU

ವೈದ್ಯಕೀಯ ಸೇವಾ ಶಿಬಿರವನ್ನು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಉದ್ಘಾಟಿಸಿದರು. ಸಾಧ್ವಿ ಮಾತಾನಂದಮಯೀ, ಎ.ಸುರೇಶ್ ರೈ, ಲೋಕನಾಥ ಶೆಟ್ಟಿ ತಾಳಿಪ್ಪಾಡಿಗುತ್ತು, ವೆಂಕಟ್ರಮಣ ಹೊಳ್ಳ, ಅಶೋಕ್ ಕುಮಾರ್ ಉಪಸ್ಥಿತರಿದ್ದರು.
ವೈದ್ಯಕೀಯ ಸೇವಾ ಶಿಬಿರವನ್ನು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಉದ್ಘಾಟಿಸಿದರು. ಸಾಧ್ವಿ ಮಾತಾನಂದಮಯೀ, ಎ.ಸುರೇಶ್ ರೈ, ಲೋಕನಾಥ ಶೆಟ್ಟಿ ತಾಳಿಪ್ಪಾಡಿಗುತ್ತು, ವೆಂಕಟ್ರಮಣ ಹೊಳ್ಳ, ಅಶೋಕ್ ಕುಮಾರ್ ಉಪಸ್ಥಿತರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಒಡಿಯೂರು ಶ್ರೀ ಆಶೀರ್ವಚನ
  • ವೈದ್ಯಕೀಯ ಸೇವಾ ಶಿಬಿರ ಉದ್ಘಾಟನೆ
ವಿಟ್ಲ: ಆರೋಗ್ಯ ಮತ್ತು ಆಯುಷ್ಯ ಜತೆಯಾಗಿ ಸಾಗಿದಾಗ ಬದುಕಿಗೆ ಸಹಕಾರಿಯಾಗುತ್ತದೆ. ಆರೋಗ್ಯ ಉತ್ತಮವಾಗಿರಬೇಕಾದರೆ ಆಹಾರದ ಕಡೆಗೆ ಗಮನಕೊಡಬೇಕು. ಬದುಕು ಚಲನಶೀಲವಾಗಿದ್ದು, ದೇಹ ಹಾಗೂ ಮನಸ್ಸು ಇದಕ್ಕೆ ಪೂರಕವಾಗಿರಬೇಕು. ಒತ್ತಡದಿಂದ ತಾಳ್ಮೆ, ಸಹನೆಯ ಕೊರತೆ ಸಮಾಜದಲ್ಲಿ ಕಾಣುತ್ತಿದೆ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು.
ಒಡಿಯೂರು ರಾಜಾಂಗಣದಲ್ಲಿ ಶ್ರೀಗಳ ಜನ್ಮದಿನೋತ್ಸವದ ಅಂಗವಾಗಿ ಜನ್ಮದಿನೋತ್ಸವ ಸಮಿತಿ ವತಿಯಿಂದ ಕೆ.ಎಸ್.ಹೆಗ್ಡೆ ಚಾರಿಟೆಬಲ್ ಆಸ್ಪತ್ರೆ, ಎ.ಬಿ.ಶೆಟ್ಟಿ ಸ್ಮಾರಕ ದಂತ ವೈದ್ಯಕೀಯ ಮಹಾವಿದ್ಯಾಲಯ, ಪ್ರಸಾದ್ ನೇತ್ರಾಲಯ, ಒನ್ ಸೈಟ್ ಎಸ್ಸಿಲಾರ್ ಲಕ್ಸೋಟಿಕ್ -ಂಡೇಶನ್, ವೆನ್ಲಾಕ್ ಜಿಲ್ಲಾ ಆಸ್ಪತ್ರೆ, ಶಾರದಾ ಆಯುರ್ವೇದಿಕ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಸಹಯೋಗದಲ್ಲಿ ಆಯೋಜಿಸಿದ್ದ ವೈದ್ಯಕೀಯ ಸೇವಾ ಶಿಬಿರ ಉದ್ಘಾಟಿಸಿ ಆಶೀರ್ವಚನ ನೀಡಿದರು.
ಸಾಧ್ವಿ ಮಾತಾನಂದಮಯೀ ಸಾನ್ನಿಧ್ಯ ವಹಿಸಿದ್ದರು. ಶಾರದಾ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ಸಂದೀಪ್ ಬೇಕಲ್ ಆರ್., ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ರಕ್ತ ವಿಭಾಗದ ಅಶೋಕ್, ಎ.ಬಿ.ಶೆಟ್ಟಿ ಮೆಮೋರಿಯಲ್ ಇನ್‌ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸ್ ಪ್ರಾಂಶುಪಾಲೆ ಡಾ.ಮಿತ್ರಾ ಎನ್.ಹೆಗ್ಡೆ, ಕೆ.ಎಸ್.ಹೆಗ್ಡೆ ಚಾರಿಟೆಬಲ್ ಆಸ್ಪತ್ರೆಯ ನ್ಯುರೋ ಸರ್ಜರಿ ವಿಭಾಗ ಮುಖ್ಯಸ್ಥ ಡಾ.ಅನಂತನ್ ಆರ್., ಒನ್ ಸೈಟ್ ಎಸ್ಸಿಲಾರ್ ಲಕ್ಸೋಟಿಕ್ -ಂಡೇಶನ್ ಮುಖ್ಯ ವ್ಯವಸ್ಥಾಪಕ ಧರ್ಮಪ್ರಸಾದ್ ರೈ, ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ಅಧ್ಯಕ್ಷ ಎ.ಸುರೇಶ್ ರೈ, ಜನ್ಮದಿನೋತ್ಸವ ಸಮಿತಿ ಅಧ್ಯಕ್ಷ ಲೋಕನಾಥ ಶೆಟ್ಟಿ ತಾಳಿಪ್ಪಾಡಿಗುತ್ತು, ಉಪಾಧ್ಯಕ್ಷ ವೆಂಕಟ್ರಮಣ ಹೊಳ್ಳ, ಪ್ರಧಾನ ಕೋಶಾಽಕಾರಿ ಅಶೋಕ್ ಕುಮಾರ್ ಉಪಸ್ಥಿತರಿದ್ದರು.
ಯೋಜನೆಯ ಪಿಆರ್‌ಒ ಮಾತೇಶ್ ಭಂಡಾರಿ ಸ್ವಾಗತಿಸಿದರು. ಪ್ರವೀಣ್ ವಂದಿಸಿದರು. ಯಶವಂತ ವಿಟ್ಲ ಕಾರ್ಯಕ್ರಮ ನಿರೂಪಿಸಿದರು.
"

ಸಂಬಂಧಗಳು ವ್ಯವಹಾರಕ್ಕೆ ಸೀಮಿತವಾಗುತ್ತಿದ್ದು, ಬದುಕು ವ್ಯಾಪಾರವಾಗಬಾರದು. ಪಾರಂಪರಿಕ ಆಹಾರಕ್ಕೆ ಅದರದ್ದೇ ಆದ ಮಹತ್ವವಿದೆ. ಹಿತಮಿತದ ಜತೆಗೆ ಋತುವಿಗೆ ಸರಿಯಾದ ಆಹಾರ ಸೇವನೆಯಿಂದ ಆರೋಗ್ಯಯುತ ಬದುಕು ನಮ್ಮದಾಗುತ್ತದೆ. ಶ್ರದ್ಧೆಯಿಂದ ಮಾಡುವ ಕಾರ್ಯದಿಂದ ಫಲ ಲಭಿಸುತ್ತದೆ.

— ಶ್ರೀ ಗುರುದೇವಾನಂದ ಸ್ವಾಮೀಜಿ, ಒಡಿಯೂರು ಸಂಸ್ಥಾನ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net