ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅನಿತಾ ಕ್ಯಾಥರಿನ್ ಪ್ರಾಸ್ತಾವಿಕವಾಗಿ ಮಾತನಾಡಿ, ಗ್ರಾಮೀಣ ಮಹಿಳೆಯರು ಆರ್ಥಿಕವಾಗಿ ಸಬಲರಾಗಬೇಕಿದ್ದರೆ, ಪಂಚಾಯಿತಿಯಲ್ಲಿ ನಡೆಯುವ ಮಹಿಳಾ ಗ್ರಾಮಸಭೆಗಳಲ್ಲಿ ಮಹಿಳೆಯರು ತಮ್ಮ ಬೇಡಿಕೆಗಳ ಬಗ್ಗೆ ಮಾತನಾಡಬೇಕು. ಈ ನಿಟ್ಟಿನಲ್ಲಿ ಮಹಿಳಾ ಗ್ರಾಮಸಭೆಗಳಿಗೆ ಮಹಿಳೆಯರ ಪಾಲ್ಗೊಳ್ಳುವಿಕೆ ಮುಖ್ಯವಾಗುತ್ತದೆ. ಉದ್ಯಮಶೀಲರಾಗಿ ಆರ್ಥಿಕತೆ ಬಲಪಡಿಸಿಕೊಂಡಲ್ಲಿ ಮಹಿಳೆಯರು ಸುಲಭವಾಗಿ ಸಮಾಜದಲ್ಲಿ ಕಾಣಿಸಿಕೊಳ್ಳುತ್ತಾರೆ ಎಂದರು.