ಕಾರುಗಳು ಡಿಕ್ಕಿಯಾಗಿ ಪಾದಚಾರಿ ಮೃತ್ಯು

ಹೆದ್ದಾರಿ ದಾಟುತ್ತಿದ್ದ ವೇಳೆ ದುರ್ಘಟನೆ
accident-15
ACCIDENT
Published on: 

ಉಳ್ಳಾಲ: ಮಸೀದಿಗೆಂದು ಹೊರಟು ರಾ.ಹೆ 66ರ ಕುಂಪಲ ಬೈಪಾಸ್‌ನಲ್ಲಿ ಹೆದ್ದಾರಿ ದಾಟುತ್ತಿದ್ದ ಸಂದರ್ಭ ವೇಗವಾಗಿ ಬಂದ ಎರಡು ಕಾರುಗಳು ಡಿಕ್ಕಿ ಹೊಡೆದ ಪರಿಣಾಮ ಅತ್ತಾವರ ಕಾಪ್ರಿಗುಡ್ಡೆ ನಿವಾಸಿ ಹನೀಫ್ ವಲಿ ಮಹಮ್ಮದ್(68) ಎಂಬುವರು ಮೃತಪಟ್ಟಿದ್ದಾರೆ.

ಮಂಗಳವಾರ ರಾತ್ರಿ ಕುಂಪಲ ಬೈಪಾಸ್‌ನಲ್ಲಿ ಮಸೀದಿಗೆ ಹೋಗಲು ಹೆದ್ದಾರಿ ದಾಟುತ್ತಿದ್ದ ವೇಳೆ ತಲಪಾಡಿಯಿಂದ ಮಂಗಳೂರಿಗೆ ಧಾವಿಸುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ.

ಡಿಕ್ಕಿ ರಭಸಕ್ಕೆ ರಸ್ತೆಗೆಸೆಯಲ್ಪಟ್ಟ ಹನೀಫ್ ಅವರಿಗೆ ಮಂಗಳೂರಿಗೆ ಧಾವಿಸುತ್ತಿದ್ದ ಮತ್ತೊಂದು ಕಾರು ಡಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡ ಅವರನ್ನು ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅದಾಗಲೇ ಮೃತಪಟ್ಟಿದ್ದಾರೆ. ಪತ್ನಿ, ಪುತ್ರಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net