ಪ್ಲಸ್ ಟು ವಿದ್ಯಾರ್ಥಿನಿ ಆತ್ಮಹತ್ಯೆ

ಬದಿಯಡ್ಕ ಠಾಣೆಯಲ್ಲಿ ಪ್ರಕರಣ ದಾಖಲು
ಆತ್ಮಹತ್ಯೆ
ಆತ್ಮಹತ್ಯೆ
Published on: 

ಕಾಸರಗೋಡು: ಬದಿಯಡ್ಕ ಪೊಲೀಸ್ ಠಾಣೆ ವ್ಯಾಪ್ತಿಯ ನೆಕ್ರಾಜೆಯಲ್ಲಿ ಪ್ಲಸ್ ಟು ವಿದ್ಯಾರ್ಥಿನಿ ಮೃತದೇಹ ಮನೆ ಕೊಠಡಿಯೊಳಗೆ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ವೊರ್ಕೂಡ್ಲು ಕನಿಯಾನ್‌ಮೂಲೆ ನಿವಾಸಿ ಜಯರಾಂ- ಬಿಂದು ದಂಪತಿ ಪುತ್ರಿ ಧನುಷಾ (17) ಮೃತರು.

ಮಂಗಳವಾರ ರಾತ್ರಿ ಮನೆ ಕೊಠಡಿಯೊಳಗೆ ಫ್ಯಾನ್‌ಗೆ ನೇಣುಬಿಗಿದ ಸ್ಥಿತಿಯಲ್ಲಿ ಕಂಡುಬಂದ ಧನುಷಾಳನ್ನು ನೇಣಿನಿಂದ ಕೆಳಗಿಳಿಸಿ ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಪ್ರಯೋಜನವಾಗಲಿಲ್ಲ.

ಮುಳ್ಳೇರಿಯ ಸರ್ಕಾರಿ ಪ್ರೊಫೆಷನಲ್ ಹೈಯರ್ ಸೆಕೆಂಡರಿ ಶಾಲೆಯ ಪ್ಲಸ್ ಟು ವಿದ್ಯಾರ್ಥಿನಿ. ಕಲಿಕೆಯಲ್ಲಿ ಮುಂದಿದ್ದ ಈಕೆಯ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಬದಿಯಡ್ಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net