ಪೋಕ್ಸೋ ಆರೋಪಿ ಠಾಣೆಯಿಂದ ಪರಾರಿ ಯತ್ನ

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Published on

ಕಾಸರಗೋಡು: ಪೋಕ್ಸೋ ಪ್ರಕರಣ ಆರೋಪಿ ಕಾಸರಗೋಡು ನಗರ ಠಾಣೆಯಿಂದ ಪರಾರಿಯಾಗಲು ಯತ್ನಿಸಿದ್ದು, ಈತನನ್ನು ತಾಸುಗಳೊಳಗೆ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.


ನೆಕ್ರಾಜೆ ಕೊರೆಕ್ಕಾನ ನಿವಾಸಿ ಅಶ್ವಥ್ ಎಂಬಾತ ಪರಾರಿಯಾಗಲು ಯತ್ನಿಸಿದ ಆರೋಪಿ. ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಪೋಕ್ಸೋ ಪ್ರಕರಣವೊಂದಕ್ಕೆ ಸಂಬಂಧಿಸಿ ಅಶ್ವಥ್‌ನನ್ನು ಬಂಧಿಸಿ ನ್ಯಾಯಾಂಗ ಬಂಧನದಲ್ಲಿರಿಸಲಾಗಿದ್ದು, ಈ ಬಗ್ಗೆ ಹೆಚ್ಚಿನ ವಿಚಾರಣೆಗಾಗಿ ಪೊಲೀಸರು ಈತನನ್ನು ವಶಕ್ಕೆ ತೆಗೆದುಕೊಂಡು ಠಾಣೆಯಲ್ಲಿ ವಿಚಾರಣೆಗೊಳಪಡಿಸುತ್ತಿದ್ದಂತೆ ಪೊಲೀಸರ ಕಣ್ತಪ್ಪಿಸಿ ಪರಾರಿಯಾಗಲು ಯತ್ನಿಸಿದ್ದಾನೆ. ತಕ್ಷಣ ಪೊಲೀಸರು ಹುಡುಕಾಟ ಆರಂಭಿಸಿದ್ದು, ತಾಸುಗಳ ನಂತರ ನಗರದ ಆನೆಬಾಗಿಲಿನ ಕುರುಚಲು ಪೊದೆಯೆಡೆಯಲ್ಲಿ ಅವಿತು ಕುಳಿತಿದ್ದಾಗ ಆರೋಪಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net