ಪೋಕ್ಸೋ ಪ್ರಕರಣ ಮಂಜೇಶ್ವರ ಠಾಣೆಗೆ ವರ್ಗಾವಣೆ

ಮಗುವಿಗೆ ಜನ್ಮ ನೀಡಿದ ಪಿಯುಸಿ ವಿದ್ಯಾರ್ಥಿನಿ
ಪೋಕ್ಸೋ ಸಂಗ್ರಹ ಚಿತ್ರ.
ಪೋಕ್ಸೋ ಸಂಗ್ರಹ ಚಿತ್ರ.
Published on: 

ಕಾಸರಗೋಡು: ಅಪ್ರಾಪ್ತೆ ಮಗುವಿಗೆ ಜನ್ಮ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ವಿಟ್ಲ ಠಾಣೆ ಪೊಲೀಸರು ದಾಖಲಿಸಿಕೊಂಡಿದ್ದ ಕೇಸನ್ನು ಮಂಜೇಶ್ವರ ಠಾಣೆಗೆ ವರ್ಗಾಯಿಸಲಾಗಿದೆ.

ವಿಟ್ಲ ಠಾಣೆ ವ್ಯಾಪ್ತಿಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಸೆ.8ರಂದು ಆಸ್ಪತ್ರೆಯೊಂದರಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಳು. ಅತಿಯಾದ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆಗೆ ದಾಖಲಿಸಿ ವೈದ್ಯಕೀಯ ತಪಾಸಣೆ ನಡೆಸಿದಾಗ ಗರ್ಭಿಣಿಯಾಗಿರುವುದು ಖಚಿತಗೊಂಡಿದ್ದು, ಅದೇ ದಿನ ಹೆರಿಗೆಯಾಗಿತ್ತು.

ಆಸ್ಪತ್ರೆ ಅಧಿಕಾರಿಗಳು ನೀಡಿದ ದೂರಿನನ್ವಯ ಪೊಲೀಸರು ಕೇಸು ದಾಖಲಿಸಿಕೊಂಡು, ತನಿಖೆ ನಡೆಸಿದಾಗ ವಿದ್ಯಾರ್ಥಿ ಸಂಬಂಧಿಕನಾದ ಅಪ್ರಾಪ್ತ ಬಾಲಕ ದೌರ್ಜನ್ಯ ನಡೆಸಿರುವ ಬಗ್ಗೆ ಮಾಹಿತಿ ಲಭಿಸಿತ್ತು. ಅಪ್ರಾಪ್ತನ ವಿರುದ್ಧ ಪೋಕ್ಸೋ ಅನ್ವಯ ಕೇಸು ದಾಖಲಿಸಲಾಗಿತ್ತು.

ಸಂತ್ರಸ್ತ ವಿದ್ಯಾರ್ಥಿನಿ ಮತ್ತು ಆರೋಪಿ ಪರಸ್ಪರ ಪ್ರೀತಿಸುತ್ತಿದ್ದು, ವಿದ್ಯಾರ್ಥಿನಿಯನ್ನು ಮಂಜೇಶ್ವರ ಠಾಣೆ ವ್ಯಾಪ್ತಿಯ ಕಟ್ಟಡವೊಂದಕ್ಕೆ ಕರೆದೊಯ್ದು ಕಿರುಕುಳ ನೀಡಿರುವ ಬಗ್ಗೆ ಮಾಹಿತಿ ಲಭಿಸಿತ್ತು. ಪ್ರಸಕ್ತ ಮಂಜೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net