ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಚಿವ ದಿನೇಶ್ ಗುಂಡೂರಾವ್ ಸ್ವಾಗತಿಸಿದರು.
Published on:
Copied
Follow Us
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಲು ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಶುಕ್ರವಾರ ಮಂಗಳೂರು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಲಾಯಿತು.
ಬೆಳಗ್ಗೆ 10.25ಕ್ಕೆ ಭಾರತೀಯ ವಾಯುಪಡೆ ವಿಮಾನದಲ್ಲಿ ಆಗಮಿಸಿದ ಪ್ರಧಾನಮಂತ್ರಿ ಅವರನ್ನು, ರಾಜ್ಯ ಸರಕಾರದ ಪರವಾಗಿ ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ರಾಜೇಶ್ ನಾಯಕ್, ಭಾಗೀರಥಿ ಮುರುಳ್ಯ, ಗ್ರೇಟರ್ ಬೆಂಗಳೂರು ಆಯುಕ್ತ ಮಹೇಶ್ವರ ರಾವ್, ಪೊಲೀಸ್ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ, ಜಿಲ್ಲಾಧಿಕಾರಿ ಎಚ್.ವಿ. ದರ್ಶನ್ ಮತ್ತಿತರರು ಸ್ವಾಗತಿಸಿದರು.
ಬಳಿಕ ಪ್ರಧಾನಮಂತ್ರಿ ಅವರು ವಾಯುಪಡೆ ಹೆಲಿಕಾಪ್ಟರ್ ನಲ್ಲಿ ಉಡುಪಿಗೆ ತೆರಳಿದರು.