ಕಾಲೇಜಿನಲ್ಲಿ ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆ ನಿರಂತರವಾಗಿ ನಡೆಯುತ್ತಿರುತ್ತದೆ. ಇದು ಪ್ರಶಸ್ತಿ ಪಡೆದುಕೊಳ್ಳುವುದರ ಜತೆಗೆ ವಿದ್ಯಾರ್ಥಿಯ ಸರ್ವಾಂಗೀಣ ಅಭಿವೃದ್ಧಿಗೂ ಪೂರಕ. ವಿದ್ಯಾರ್ಥಿಗಳ ಪ್ರತಿಭೆ, ಕೌಶಲ ಬೆಳೆಸಿ ಪ್ರೋತ್ಸಾಹಿಸುವ ಕಾರ್ಯವನ್ನು ಎಸ್‌ಡಿಎಂ ಸಂಸ್ಥೆ ಮಾಡುತ್ತಾ ಬಂದಿದೆ. ವಿದ್ಯಾರ್ಥಿಗಳ ಸಾಧನೆ ಬದುಕಿನುದ್ದಕ್ಕೂ ನಿರಂತರವಾಗಿರಬೇಕು.