೩೧ರಂದು ‘ಪುತ್ತೂರು ಚಲೋ’ PUTTUR

ಪುತ್ತೂರು ಆಸ್ಪತ್ರೆಗೆ ಭೇಟಿ ನೀಡಿ ಮಹಿಳೆಯ ಆರೋಗ್ಯ ವಿಚಾರಿಸಿದ ವಿಶ್ವ ಹಿಂದೂ ಪರಿಷತ್ ಸಹ ಕಾರ್ಯದರ್ಶಿ ಶರಣ್ ಪಂಪ್‌ವೆಲ್.
ಪುತ್ತೂರು ಆಸ್ಪತ್ರೆಗೆ ಭೇಟಿ ನೀಡಿ ಮಹಿಳೆಯ ಆರೋಗ್ಯ ವಿಚಾರಿಸಿದ ವಿಶ್ವ ಹಿಂದೂ ಪರಿಷತ್ ಸಹ ಕಾರ್ಯದರ್ಶಿ ಶರಣ್ ಪಂಪ್‌ವೆಲ್.
Published on

ಪ್ರಮುಖ ಮುಖ್ಯಾಂಶಗಳು

  • ಹಿಂಜಾವೇ ಪ್ರಾಂತ ಸಂಘಟನಾ ಕಾರ್ಯದರ್ಶಿ ಪ್ರಶಾಂತ್ ಹೇಳಿಕೆ
ಪುತ್ತೂರು: ಹಿಂದೂ ಜಾಗರಣ ವೇದಿಕೆ ಕರೆಕೊಟ್ಟ ಸ್ವಯಂ ಪ್ರೇರಿತ ಬಂದ್‌ಗೆ ಹಿಂದೂ ಸಮಾಜ ಸಹಕಾರ ನೀಡಿದೆ. ಘಟನೆಯ ಹಿಂದಿರುವ ನಿಷೇಧಿತ ಪಿಎಫ್‌ಐ ಸಂಘಟನೆಯ ಕಾರ್ಯಕರ್ತರನ್ನು ಕೂಡಾ ತನಿಖೆ ಮಾಡಬೇಕು. ತಾಯಿಯ ರಕ್ಷಣೆಗೆ ಬಂದ ಮಗನ ಮೇಲೆ ಕೊಲೆ ಯತ್ನ ಕೇಸು ದಾಖಲು ಮಾಡಿದ್ದು, ಬಿಎನ್‌ಎಸ್ ೧೦೯ ಸೆಕ್ಷನ್ ಕೂಡ ತೆಗೆಯಬೇಕು ಎಂದು ಆಗ್ರಹಿಸಿ ಆ.೩೧ರಂದು ವಿಶ್ವ ಹಿಂದೂ ಪರಿಷತ್, ಬಜರಂಗದಳ ಮತ್ತು ಹಿಂದೂ ಜಾಗರಣ ವೇದಿಕೆ ಪುತ್ತೂರು ವತಿಯಿಂದ ‘ಪುತ್ತೂರು ಚಲೋ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹಿಂದೂ ಜಾಗರಣ ವೇದಿಕೆ ಪ್ರಾಂತ ಸಂಘಟನಾ ಕಾರ್ಯದರ್ಶಿ ಪ್ರಶಾಂತ್ ಹೇಳಿದರು.
ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಮಹಿಳೆಯ ಆರೋಗ್ಯ ವಿಚಾರಿಸಿ ಮಾಧ್ಯಮದ ಜತೆಗೆ ಮಾತನಾಡಿ, ಪುತ್ತೂರಿನಲ್ಲಿ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದೇವೆ. ಇಡೀ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಹಿಂದೂ ಯುವಕರು, ಹಿಂದೂ ಸಮಾಜ, ಪುತ್ತೂರಿನ ವ್ಯಾಪಾರಸ್ಥರು, ವರ್ತಕರು ತಮ್ಮ ಅಂಗಡಿ ಮುಂಗಟ್ಟುಗಳನ್ನೆಲ್ಲ ಬಂದ್ ಮಾಡುವಂತೆ ಕರೆ ಕೊಡುವುದಿಲ್ಲ. ಆದರೆ ಅವರೆಲ್ಲ ನಮ್ಮ ಪ್ರತಿಭಟನೆಯಲ್ಲಿ ಭಾಗವಹಿಸುಂತೆ ಮನವಿ ಮಾಡುತ್ತೇವೆ ಎಂದರು.
ವಿಶ್ವ ಹಿಂದೂ ಪರಿಷತ್ ಸಹ ಕಾರ್ಯದರ್ಶಿ ಶರಣ್ ಪಂಪ್‌ವೆಲ್, ಬಜರಂಗದಳ ವಿಭಾಗ ಸಹಸಂಚಾಲಕ ಪುನೀತ್ ಅತ್ತಾವರ, ಹಿಂದೂ ಜಾಗರಣ ವೇದಿಕೆಯ ನರಸಿಂಹ ಮಾಣಿ, ವಿಶ್ವ ಹಿಂದೂ ಪರಿಷತ್‌ನ ನವಿನ್ ನೆರಿಯ, ದಾಮೋದರ್ ಪಾಟಾಳಿ, ಸಂತೋಷ್, ಹರೀಶ್ ದೋಳ್ಳಾಡಿ, ರವಿ ಶೆಟ್ಟಿ ಕಡಬ, ಅಜಿತ್ ರೈ ಹೊಸಮನೆ, ಸಂಘಟನೆಯ ಪ್ರಮುಖರು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net