ಕುಟುಂಬದ ಮೇಲೆ ಆಕ್ರಮಣವಾದಾಗ ಆತ್ಮರಕ್ಷಣೆ ಹಕ್ಕು PUTTUR

ದರ್ಬೆ ಘಟನೆಯಲ್ಲಿ ಗಾಯಗೊಂಡು ಪುತ್ತೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಂಜನಾ ಪೈ ಅವರನ್ನು ಹಿಂದು ಮುಖಂಡ ಡಾ.ಕಲ್ಲಡ್ಕ ಪ್ರಭಾಕರ ಭಟ್, ಕಮಲಾ ಪ್ರಭಾಕರ ಭಟ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ದರ್ಬೆ ಘಟನೆಯಲ್ಲಿ ಗಾಯಗೊಂಡು ಪುತ್ತೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಂಜನಾ ಪೈ ಅವರನ್ನು ಹಿಂದು ಮುಖಂಡ ಡಾ.ಕಲ್ಲಡ್ಕ ಪ್ರಭಾಕರ ಭಟ್, ಕಮಲಾ ಪ್ರಭಾಕರ ಭಟ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
Published on

ಪ್ರಮುಖ ಮುಖ್ಯಾಂಶಗಳು

  • ಡಾ.ಪ್ರಭಾಕರ ಭಟ್ ಕಲ್ಲಡ್ಕ ಪ್ರತಿಪಾದನೆ
  • ದರ್ಬೆ ಘಟನೆ ಸಂತ್ರಸ್ತೆ ಆರೋಗ್ಯ ವಿಚಾರಣೆ
ಪುತ್ತೂರು: ನಮ್ಮ ಮೇಲೆ ಅಥವಾ ನಮ್ಮ ಕುಟುಂಬದವರ ಮೇಲೆ ಆಕ್ರಮಣ ನಡೆದಾಗ ಆತ್ಮರಕ್ಷಣೆ ಮಾಡಿಕೊಳ್ಳುವ ಹಕ್ಕು ಪ್ರತಿಯೊಬ್ಬರಿಗೂ ಇದೆ. ಕಾನೂನನ್ನು ಕೈಗೆತ್ತಿಕೊಳ್ಳುವುದು ನಮ್ಮ ಉದ್ದೇಶವಲ್ಲ. ಆದರೆ ಆಕ್ರಮಣವಾದಾಗ ರಕ್ಷಿಸಿಕೊಳ್ಳುವುದೇ ಅಪರಾಧವಾಗಬಾರದು. ದರ್ಬೆ ಘಟನೆಯ ಹಿನ್ನೆಲೆಯಲ್ಲಿ ಹಿಂದೂ ಸಮಾಜವು ಮುಂದಿನ ದಿನಗಳಲ್ಲಿ ಎಲ್ಲ ರೀತಿಯಿಂದಲೂ ಎಚ್ಚರಿಕೆಯಿಂದ ಇರಬೇಕು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಮುಖಂಡ ಮುಖಂಡ ಡಾ.ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು.
ದರ್ಬೆ ಘಟನೆಯಲ್ಲಿ ಗಾಯಗೊಂಡು ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಂಜನಾ ಪೈ ಅವರನ್ನು ಗುರುವಾರ ರಾತ್ರಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದವರ ವಿರುದ್ಧವೂ ಸೂಕ್ತ ಕ್ರಮ ಕೈಗೊಳ್ಳಬೇಕು. ಯಾವುದೇ ಸಂಘಟನೆ ಅಥವಾ ಗುಂಪಿನಿಂದ ಜನರಲ್ಲಿ ಭಯದ ವಾತಾವರಣ ಸೃಷ್ಟಿಸುವ ಪ್ರಯತ್ನ ನಡೆಯಬಾರದು. ದರ್ಬೆ ಘಟನೆ ಉದ್ದೇಶಪೂರ್ವಕವಾಗಿ ನಡೆದಿದೆಯೇ ಎಂಬುದನ್ನು ತನಿಖೆ ಮೂಲಕ ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದ ಅವರು, ಪೊಲೀಸರು ಸರ್ಕಾರದ ಒತ್ತಡಕ್ಕೆ ಒಳಗಾಗದೆ ನ್ಯಾಯಯುತವಾಗಿ ಕರ್ತವ್ಯ ನಿರ್ವಹಿಸಬೇಕು. ಸರ್ಕಾರವೂ ಮತಬ್ಯಾಂಕ್ ರಾಜಕಾರಣವನ್ನು ಬದಿಗಿಟ್ಟು ಎಲ್ಲರಿಗೂ ಸಮಾನ ರಕ್ಷಣೆ ನೀಡಬೇಕು ಎಂದು ಹೇಳಿದರು.
ಅಂಜನಾ ಪೈ ಅವರ ಪತಿ ಸದಾಶಿವ ಪೈ ಜತೆ ಮಾತುಕತೆ ನಡೆಸಿದರು. ಕಮಲಾ ಪ್ರಭಾಕರ ಭಟ್ ಜತೆಗಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net