‘ಪುತ್ತೂರು ದಸರಾ’ ಹೆಸರಿನಲ್ಲಿ ನವರಾತ್ರಿ ವೈಭವ PUTTUR

೯೨ನೇ ವರ್ಷದ ಶಾರದೋತ್ಸವಕ್ಕೆ ಹೊಸ ರೂಪ | ಕೆ.ಸೀತಾರಾಮ ರೈ ಮಾಹಿತಿ
Published on: 

ಪುತ್ತೂರು: ಮೈಸೂರು, ಮಡಿಕೇರಿ, ಕುದ್ರೋಳಿಯಂತೆ ಪುತ್ತೂರಿನಲ್ಲೂ ಹಿಂದೆ ವೈಭವದಿಂದ ದಸರಾ ಉತ್ಸವ ನಡೆಯುತ್ತಿದ್ದವು. ಕಾಲಕ್ರಮೇಣ ಆ ಪರಂಪರೆಯ ವೈಭವ ಕಡಿಮೆಯಾಗಿದ್ದರೂ, ಕಳೆದ ಮೂರು ವರ್ಷಗಳಿಂದ ಶಾರದೋತ್ಸವದ ಮೂಲಕ ಪುತ್ತೂರಿನ ದಸರಾ ಪರಂಪರೆಯನ್ನು ಮರುಕಳಿಸುವ ಪ್ರಯತ್ನ ನಡೆಯುತ್ತಿದೆ. ಶ್ರೀ ಶಾರದಾ ಭಜನಾ ಮಂದಿರದಲ್ಲಿ ಅ.೧೧ರಿಂದ ೨೧ರವರೆಗೆ ೯೨ನೇ ವರ್ಷದ ನವರಾತ್ರಿ ಪೂಜೆ ಹಾಗೂ ಶಾರದೋತ್ಸವ ವೈಭವ ‘ಪುತ್ತೂರು ದಸರಾ’ ಹೆಸರಿನಲ್ಲಿ ನಡೆಯಲಿದೆ ಎಂದು ಶ್ರೀ ಶಾರದಾ ಭಜನಾ ಮಂದಿರದ ಅಧ್ಯಕ್ಷ ಕೆದಂಬಾಡಿಗುತ್ತು ಸೀತಾರಾಮ ರೈ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪುತ್ತೂರು ಶಾರದಾ ಭಜನಾ ಮಂದಿರದಲ್ಲಿ ಕಳೆದ ಮೂರು ವರ್ಷಗಳಿಂದ ಶಾರದೋತ್ಸವವನ್ನು ಗತಕಾಲದ ವೈಭವ ಮರುಕಳಿಸುವಂತೆ ಆಚರಿಸಲಾಗುತ್ತಿದೆ. ೧೧ರಿಂದ ಆರಂಭವಾಗುವ ಉತ್ಸವದಲ್ಲಿ ನವರಾತ್ರಿ ಪೂಜೆ, ಶ್ರೀ ಶಾರದಾ ಆರಾಧನೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಚಂಡಿಕಾಹೋಮ ಸಹಿತಿ ಧಾರ್ಮಿಕ ಆಚರಣೆಗಳು, ಪ್ರತಿದಿನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ೨೧ರಂದು ೨೦ಕ್ಕೂ ಅಽಕ ಕಲಾತಂಡಗಳು, ಸಾವಿರಾರು ಕುಣಿತ ಭಜನಾ ತಂಡಗಳು ಹಾಗೂ ವಿವಿಧ ವಾದ್ಯಘೋಷಗಳೊಂದಿಗೆ ಶ್ರೀ ಶಾರದಾ ಮಾತೆಯ ಭವ್ಯ ಶೋಭಾಯಾತ್ರೆ ನಡೆಯಲಿದೆ. ವರ್ಷದಿಂದ ವರ್ಷಕ್ಕೆ ಹೊಸತನವನ್ನು ಅಳವಡಿಸಿಕೊಳ್ಳಲಾಗುತ್ತಿದೆ ಎಂದರು.

ಪುತ್ತೂರು ದಸರಾ ಸಮಿತಿ ಗೌರವ ಮಾರ್ಗದರ್ಶಕ ಡಾ.ಸುರೇಶ್ ಪುತ್ತೂರಾಯ, ಉಪಾಧ್ಯಕ್ಷ ದಯಾನಂದ ಪಿ., ಶಾರದಾ ಭಜನಾ ಮಂದಿರದ ಪ್ರಧಾನ ಕಾರ್ಯದರ್ಶಿ ಜಯಂತ್ ಉರ್ಲಾಂಡಿ, ಕೋಶಾಧಿಕಾರಿ ವಸಂತ್ ಕುಮಾರ್, ಶೋಭಾಯಾತ್ರೆ ಸಂಚಾಲಕ ಕೃಷ್ಣ ಎಂ.ಅಳಿಕೆ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net