ಸನ್ಮಾರ್ಗದಲ್ಲಿ ಮುನ್ನಡೆಯಲು ಮಹಾತ್ಮರ ಸ್ಮರಣೆ VALMIKI

ಪ್ರಮೋದ್ ಕುಮಾರ್ ಅಭಿಮತ | ವಾಲ್ಮೀಕಿ ಜಯಂತಿ ಆಚರಣೆ
puttur valmiki
೨೦೨೫-೨೬ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಅತಿ ಹೆಚ್ಚ ಅಂಕ ಪಡೆದ ವಾಲ್ಮೀಕಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಾದ ಆರಾಧನಾ ನಾಯ್ಕ, ಧೀರಜ್, ಮಾನಸ, ದಿಶಾ ಆರ್. ಅವರನ್ನು ಸನ್ಮಾನಿಸಲಾಯಿತು. ಪ್ರಮೋದ್ ಕುಮಾರ್, ಎಸ್.ಬಿ.ಕೂಡಲಗಿ, ಶಂಕರಿ ಪಟ್ಟೆ ಇತರರು ಇದ್ದರು.
Published on: 

ಪುತ್ತೂರು: ಜನರಲ್ಲಿ ಸಾಧಕರ ಸಾಧನೆಗಳ ಬಗ್ಗೆ ಅರಿವು ಮೂಡಿಸಿ, ಸಮಾಜವನ್ನು ಸನ್ಮಾರ್ಗದಲ್ಲಿ ಮುನ್ನಡೆಸಲು ಸರ್ಕಾರ ಮಹಾತ್ಮರ ಜಯಂತಿ ಆಚರಿಸುತ್ತಿದೆ. ಜೀವನದಲ್ಲಿ ತಪ್ಪು ಮಾಡದವರು ಯಾರೂ ಇಲ್ಲ, ಆದರೆ ತಪ್ಪನ್ನು ತಿದ್ದಿಕೊಳ್ಳುವವರು ಸಮಾಜದಲ್ಲಿ ಅದ್ಭುತ ವ್ಯಕ್ತಿಗಳಾಗುತ್ತಾರೆ ಎಂದು ಪೊಲೀಸ್ ಉಪನಿರೀಕ್ಷಕ ಪ್ರಮೋದ್ ಕುಮಾರ್ ಹೇಳಿದರು.

ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಪುತ್ತೂರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಾಲ್ಮೀಕಿ ಮಹರ್ಷಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ ಮಾತನಾಡಿ, ಬೇಟೆ ಮಾಡುತ್ತಿದ್ದ ವ್ಯಕ್ತಿಯೊಬ್ಬ ಮಹಾತ್ಮನಾಗಿ ಪರಿವರ್ತನೆಯಾಗಿದ್ದಾರೆ. ವಾಲ್ಮೀಕಿ ಮಹರ್ಷಿಯ ತ್ಯಾಗ, ಆದರ್ಶಗಳನ್ನು ಮತ್ತೆ ನೆನಪಿಸುವ ಕಾರ್ಯ ಆಚರಣೆಯ ಮೂಲಕ ನಡೆಯುತ್ತಿದ್ದು ಇದು ಎಲ್ಲ ಶಾಲೆಗಳಲ್ಲೂ ನಡೆಯಬೇಕು ಎಂದರು.

ತಹಸೀಲ್ದಾರ್ ಎಸ್.ಬಿ.ಕೂಡಲಗಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯಶಿಕ್ಷಕಿ ಶಂಕರಿ ಪಟ್ಟೆ ಸಂಸ್ಮರಣಾ ಉಪನ್ಯಾಸ ನೀಡಿದರು. ೨೦೨೫-೨೬ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಅತಿ ಹೆಚ್ಚ ಅಂಕ ಪಡೆದ ವಾಲ್ಮೀಕಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಾದ ಆರಾಧನಾ ನಾಯ್ಕ, ಧೀರಜ್, ಮಾನಸ, ದಿಶಾ ಆರ್. ಅವರನ್ನು ಸನ್ಮಾನಿಸಲಾಯಿತು.

ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ, ಶಿಕ್ಷಣ ಸಂಯೋಜಕ ಹರಿಪ್ರಸಾದ್ ಉಪಸ್ಥಿತರಿದ್ದರು. ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ಸುನೀತಾ ಕುಮಾರಿ ಸ್ವಾಗತಿಸಿದರು. ವಸತಿ ಶಾಲೆ ಶಿಕ್ಷಕಿ ಲಕ್ಷ್ಮೀ ಸನ್ಮಾನಿತರ ಪರಿಚಯ ಮಾಡಿದರು. ಸಂಧ್ಯಾ ವಂದಿಸಿದರು. ಕೊಣಾಲು ವಸತಿನಿಲಯದ ಮೇಲ್ವಿಚಾರಕಿ ಸವಿತಾ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net