ಮಂಗಳೂರು ಖಾಸಗಿ ಕಾಲೇಜು ವಿದ್ಯಾರ್ಥಿಗಳಿಂದ ರ‌್ಯಾಗಿಂಗ್ ಪ್ರಕರಣ ದಾಖಲು

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Published on

ಮಂಗಳೂರು: ನಗರದ ಪಾಂಡೇಶ್ವರದ ಖಾಸಗಿ ಕಾಲೇಜೊಂದರ ಇಬ್ಬರು ಕಿರಿಯ ವಿದ್ಯಾರ್ಥಿಗಳ ಮೇಲೆ ರ‌್ಯಾಗಿಂಗ್ ನಡೆಸಿದ ಆರು ಮಂದಿ ಹಿರಿಯ ವಿದ್ಯಾರ್ಥಿಗಳ ವಿರುದ್ಧ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಪ್ಪು ಬಣ್ಣದ ಶೂ ಧರಿಸಿದ್ದರು ಎಂಬ ವಿಚಾರಕ್ಕೆ ಇಬ್ಬರು ಪ್ರಥಮ ವರ್ಷದ ವಿದ್ಯಾರ್ಥಿಗಳ ಮೇಲೆ ಹಿರಿಯ ವಿದ್ಯಾರ್ಥಿಗಳ ಗುಂಪು ಹಲ್ಲೆ ನಡೆಸಿದ್ದಾರೆ. ಘಟನೆಯಲ್ಲಿ ಗಾಯಗೊಂಡ ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾಗಿದ್ದು, ಆರು ಮಂದಿ ಹಿರಿಯ ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.
ನಗರದ ಗುಜ್ಜರಕೆರೆ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಪ್ರಥಮ ವರ್ಷದ ವಿದ್ಯಾರ್ಥಿಗಳಾದ ಆದರ್ಶ ಮತ್ತು ಜಾಸಿನ್ ಮೇಲೆ ದ್ವಿತೀಯ ವರ್ಷದ ಲಾಜಿಸ್ಟಿಕ್ ವಿಭಾಗದ ವಿದ್ಯಾರ್ಥಿಗಳ ಗುಂಪು ಹಲ್ಲೆ ನಡೆಸಿದೆ. ಹಲ್ಲೆಗೊಳಗಾದ ಇಬ್ಬರೂ ವಿದ್ಯಾರ್ಥಿಗಳು ಕೇರಳ ಮೂಲದವರಾಗಿದ್ದಾರೆ.
ಗುಜ್ಜರಕೆರೆ ಚಹಾ ಅಂಗಡಿ ಬಳಿ ಪ್ರಥಮ ವರ್ಷದ ಇಬ್ಬರು ವಿದ್ಯಾರ್ಥಿಗಳ ಮೇಲೆ 2ನೇ ವರ್ಷದ 4 ರಿಂದ 6 ವಿದ್ಯಾರ್ಥಿಗಳು ಹಲ್ಲೆ ನಡೆಸಿರುವುದು ವರದಿಯಾಗಿದೆ. ಮೇಲ್ನೋಟಕ್ಕೆ ಇದೊಂದು ರ‌್ಯಾಗಿಂಗ್ ಘಟನೆಯಂತೆ ಕಂಡುಬರುತ್ತಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳು ವಿದ್ಯಾರ್ಥಿಗಳಿಂದ ಪ್ರಸ್ತುತ ಹೇಳಿಕೆ ದಾಖಲಿಸಿಕೊಳ್ಳಲಾಗುತ್ತಿದೆ.
ಮಂಗಳೂರು ದಕ್ಷಿಣ (ಪಾಂಡೇಶ್ವರ) ಪೊಲೀಸ್ ಠಾಣೆಯಲ್ಲಿ ಎ್ಐಆರ್ ದಾಖಲಿಸಿ, ಸಮಗ್ರ ತನಿಖೆ ನಡೆಸಲಾಗುವುದು. ತನಿಖೆಯ ನಂತರವೇ ಘಟನೆಯ ಸಂಪೂರ್ಣ ಸತ್ಯಾಸತ್ಯತೆ ಹೊರಬರಲಿದೆ ಎಂದು ನಗರ ಪೊಲೀಸ್ ಕಮಿಷನರ್ ಸುೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net