

ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ
ವಿದ್ಯಾರ್ಥಿಗಳು ಸರಿಯಾಗಿ ಓದಿ ಜ್ಞಾನಾರ್ಜನೆ ವಾಡಿದರೆ ಬದುಕಿನಲ್ಲಿ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬಹುದು. ವಿದ್ಯಾರ್ಥಿಗಳು ಎಐ, ಚಾಟ್‌ಜಿಪಿಟಿ ಅವಲಂಬಿಸಿದರೂ ಸ್ವತಃ ಓದದಿದ್ದರೆ ಯಾವುದೇ ಪ್ರಯೋಜನವಿಲ್ಲ ಎಂದು ಎಸ್‌ಡಿಎಂ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಿ.ಹರ್ಷೇಂದ್ರ ಕುವಾರ್ ಹೇಳಿದರು.
ಉಜಿರೆ ಎಸ್‌ಡಿಎಂ ತಾಂತ್ರಿಕ ಮಹಾವಿದ್ಯಾಲಯದ ವಾರ್ಷಿಕೋತ್ಸವ ಸ್ಟಾರ್ ಡಾಮ್-2026 ಮತ್ತು ಬಹುವಾನ ವಿತರಣಾ ಸವಾರಂಭ ಉದ್ಘಾಟಿಸಿ ವಾತನಾಡಿದರು. ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಅಗತ್ಯ ಸೌಲಭ್ಯಗಳನ್ನು ಸಂಸ್ಥೆ ಒದಗಿಸುತ್ತಿದೆ. ವಿದ್ಯಾರ್ಥಿಗಳು ಸಕಾರಾತ್ಮಕ ಚಿಂತನೆಯೊಂದಿಗೆ ಅವಕಾಶಗಳನ್ನು ಸದುಪಯೋಗಿಸಬೇಕು ಎಂದರು.
ಬೆಂಗಳೂರಿನ ಟಿಸಿಎಸ್ ಸಂಶೋಧನೆ ಮತ್ತು ಸೈಬರ್ ಸೆಕ್ಯುರಿಟಿ ವಿಭಾಗದ ಮುಖ್ಯಸ್ಥ ಡಾ.ರಾಜನ್ ಎಂ.ಎ. ವಾತನಾಡಿ, ಬದಲಾಗುತ್ತಿರುವ ತಂತ್ರಜ್ಞಾನಕ್ಕೆ ತಕ್ಕಂತೆ ಜ್ಞಾನವನ್ನು ವಿಸ್ತರಿಸಿಕೊಳ್ಳಬೇಕು. ನಾಲ್ಕು ವರ್ಷ ಗಳಿಸಿದ ಜ್ಞಾನ ಮುಂದಿನ 40 ವರ್ಷಗಳ ಬದುಕಿಗೆ ಉಪಯುಕ್ತವಾಗಬೇಕು. ಶಿಕ್ಷಣದ ಸವಾಲು ಮತ್ತು ಅವಕಾಶಗಳನ್ನು ಸಮರ್ಥವಾಗಿ ಎದುರಿಸಿ ಆಧುನಿಕ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಬೇಕು ಎಂದರು.
ಕಾಲೇಜಿನ ಪ್ರತಿಭಾನ್ವಿತ ಉಪನ್ಯಾಸಕರು, ವಿದ್ಯಾರ್ಥಿಗಳು, ಸಾಧಕರು ಹಾಗೂ ಶೈಕ್ಷಣಿಕ ಮತ್ತು ಕ್ರೀಡಾ ಸಾಧಕರನ್ನು ಗೌರವಿಸಲಾಯಿತು. ಡಾ.ರಜತಾ ಪಿ.ಶೆಟ್ಟಿ, ಡಾ.ಬಸವರಾಜ್, ನಿರಂಜನ್ ನಮದಾಪುರ್, ಅನೀಶ್ ಕಲ್ಮಾಡಿ, ವಿಕಾಸ್ ನಾಗಣ್ಣ ಅವರನ್ನು ಸವ್ಮಾನಿಸಲಾಯಿತು.
ಪ್ರಾಂಶುಪಾಲ ಡಾ.ಸಂದೀಪ್ ಆರ್.ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ.ಸತೀಶ್ಚಂದ್ರ ಎಸ್., ಕಾರ್ಯಕ್ರಮ ಸಂಯೋಜಕರಾದ ಡಾ.ವಿದ್ಯಾ ಕೆ., ಡಾ.ಶೋಭಾ ಪಿ., ಡಾ.ರವೀಶ್ ಪಡುಮಲೆ ಉಪಸ್ಥಿತರಿದ್ದರು.
ಸಿವಿಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ.ರವೀಶ್ ಪಡುಮಲೆ ಸ್ವಾಗತಿಸಿದರು. ಅನೀಶ್ ಕಲ್ಮಾಡಿ, ಪಂಚಮಿ ಮತ್ತು ರಕ್ಷಿತ್ ಎಸ್.ಕೆ. ನಿರೂಪಿಸಿದರು.
ಪಿಯುಸಿ, ಡಿಪ್ಲೊವಾ, ಪಾಲಿಟೆಕ್ನಿಕ್ ಮತ್ತು ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ ನಡೆದ ರಾಜ್ಯಮಟ್ಟದ ವಿವಿಧ ಸ್ಪರ್ಧೆಗಳ ಸ್ಪರ್ಧಮ್-2026ರ ವಿಜೇತರಿಗೆ ಬಹುವಾನ ವಿತರಿಸಲಾಯಿತು. ರಾಜ್ಯದ 25ಕ್ಕೂ ಅಧಿಕ ಶಿಕ್ಷಣ ಸಂಸ್ಥೆಗಳ 630ಕ್ಕೂ ಅಧಿಕ ಸ್ಪರ್ಧಿಗಳು ಭಾಗವಹಿಸಿದ್ದರು.