ಲಾರಿಗೆ ಬೈಕ್ ಡಿಕ್ಕಿಯಾಗಿ ಸವಾರ ಮೃತ್ಯು

ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡು ಸ್ಥಳದಲ್ಲಿಯೇ ಮೃತ
ಬೈಕ್ ಸವಾರ ಅಣ್ಣು
ಬೈಕ್ ಸವಾರ ಅಣ್ಣು
Published on: 

ಉಪ್ಪಿನಂಗಡಿ: ಮಂಗಳೂರು-ಬೆಂಗಳೂರು ರಾ.ಹೆ. 75ರ ಬಜತ್ತೂರು ಗ್ರಾಮದ ನೀರಕಟ್ಟೆಯಲ್ಲಿ ಬೈಕ್-ಟ್ಯಾಂಕರ್ ಲಾರಿ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ, ಪುತ್ತೂರಿನ ಕೋಡಿಂಬಾಡಿ ಗ್ರಾಮದ ಕಜೆ ನಿವಾಸಿ ಅಣ್ಣು (52) ಮೃತಪಟ್ಟಿದ್ದಾರೆ.

ಅಣ್ಣು ಅವರು ಗೋಳಿತ್ತೊಟ್ಟಿನಲ್ಲಿ ಮೃತಪಟ್ಟಿದ್ದ ಸಂಬಂಧಿಕರೊಬ್ಬರ ಮನೆಗೆ ಹೋಗಿ ಅಲ್ಲಿಂದ ತಮ್ಮ ಮನೆಗೆ ಹಿಂತಿರುಗಿ ಬರುತ್ತಿದ್ದ ವೇಳೆ ಘಟನೆ ನಡೆದಿದೆ. ಅಣ್ಣು ಬರುತ್ತಿದ್ದ ಬೈಕ್ ನೀರಕಟ್ಟೆಯಲ್ಲಿ ಮಂಗಳೂರಿನಿಂದ ಹಾಸನ ಕಡೆಗೆ ಬರುತ್ತಿದ್ದ ಲಾರಿಗೆ ಡಿಕ್ಕಿಯಾಗಿದ್ದು, ಪರಿಣಾಮ ಬೈಕ್ ಸವಾರ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಲಾರಿ ಚಾಲಕ ಮಲ್ಲಪ್ಪ ಸಂಕೋನಟ್ಟಿ ನೀಡಿದ ದೂರಿನಂತೆ ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಾರೆ ಮೇಸ್ತ್ರಿ ಕೆಲಸ ಮಾಡುತ್ತಿದ್ದ ಅವರು ತಾಯಿ, ಪತ್ನಿ, ಇಬ್ಬರು ಪುತ್ರರು, ಪುತ್ರಿಯನ್ನು ಅಗಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net