ಪುತ್ತೂರು: ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಪೈಪ್‌ಲೈನ್ ಅಳವಡಿಸುವ ಸಂದರ್ಭ ಸ್ಥಳೀಯ ಕೃಷಿಕರು ಸೂಕ್ತ ತಡೆಗೋಡೆ ನಿರ್ಮಿಸುವಂತೆ ವಿನಂತಿಸಿದರೂ, ಅಧಿಕಾರಿಗಳ ಬೇಜವಾಬ್ದಾರಿಯಿಂದಾಗಿ ಕೃಷಿ ಭೂಮಿಗೆ ಮಣ್ಣು ನುಗ್ಗುವಂತಾಗಿದೆ. ಜಿಲ್ಲಾ ಮುಖ್ಯ ರಸ್ತೆಯ ತಿರುವಿನಲ್ಲಿ ಬಾವಿಯಂತಹ ಹೊಂಡ ನಿರ್ಮಾಣವಾಗಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಇತ್ತ ತಲೆಹಾಕಿಲ್ಲ. ನಿರಂತರ ಮಳೆಯಾದರೆ ಕುದ್ದುಪದವು ಭಾಗದಿಂದ ಮಾಣಿಲ, ಬೆರಿಪದವು ಭಾಗದ ಸಂಪರ್ಕ ಸಂಪೂರ್ಣ ಕಡಿತಗೊಳ್ಳುವ ಆತಂಕ ಎದುರಾಗಿದೆ.