ಕಸೆ ಎಸೆದರೆ 5 ಸಾವಿರ ರೂ. ದಂಡ

ಬೆಳಂದೂರು ಗ್ರಾಮ ಪಂಚಾಯಿತಿಯಲ್ಲಿ ಆಡಳಿತ ಮಂಡಳಿ ಸದಸ್ಯರಿಗೆ ಬೀಳ್ಕೊಡುಗೆ ನಡೆಯಿತು. ಗ್ರಾ.ಪಂ.ಉಪಾಧ್ಯಕ್ಷ ಜಯಂತ ಅಬೀರ, ಸದಸ್ಯರಾದ ವಿಠಲ ಗೌಡ ಅಗಳಿ, ಲೋಹಿತಾಕ್ಷ ಕೆಡೆಂಜಿಕಟ್ಟ ಮೊದಲಾದವರಿದ್ದರು.
ಬೆಳಂದೂರು ಗ್ರಾಮ ಪಂಚಾಯಿತಿಯಲ್ಲಿ ಆಡಳಿತ ಮಂಡಳಿ ಸದಸ್ಯರಿಗೆ ಬೀಳ್ಕೊಡುಗೆ ನಡೆಯಿತು. ಗ್ರಾ.ಪಂ.ಉಪಾಧ್ಯಕ್ಷ ಜಯಂತ ಅಬೀರ, ಸದಸ್ಯರಾದ ವಿಠಲ ಗೌಡ ಅಗಳಿ, ಲೋಹಿತಾಕ್ಷ ಕೆಡೆಂಜಿಕಟ್ಟ ಮೊದಲಾದವರಿದ್ದರು.
Published on
ಕಡಬ: ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕ ಸ್ಥಳಗಳಲ್ಲಿ ಎಲ್ಲೆಂದರಲ್ಲಿ ಕಸ ಎಸೆದರೆ 5 ಸಾವಿರ ರೂ.ನಂತೆ ದಂಡ ವಿಧಿಸಲು, ಬೆಳಂದೂರು ಜಂಕ್ಷನ್‌ನಲ್ಲಿ ರೈಲ್ವೆ ಅಂಡರ್ ಪಾಸ್ ನಿರ್ಮಾಣಕ್ಕೆ ಸಂಬಂಧಪಟ್ಟಂತೆ ರೈಲ್ವೆ ಇಲಾಖೆಗೆ ಪತ್ರ ಬರೆಯಲು ಬೆಳಂದೂರು ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ನಿರ್ಧರಿಸಲಾಯಿತು.
ಗ್ರಾಪಂ ಸಾಮಾನ್ಯ ಸಭೆಯು ಅಧ್ಯಕ್ಷೆ ತೇಜಾಕ್ಷಿ ಕೊಡಂಗೆ ಅಧ್ಯಕ್ಷತೆಯಲ್ಲಿ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು. ಕುಡಿಯುವ ನೀರಿನ ಫಲಾನುಭವಿಗಳು ಕಡ್ಡಾಯವಾಗಿ ಮೀಟರ್ ಅಳವಡಿಸಬೇಕು. ಮೀಟರ್ ರೀಡಿಂಗ್‌ನಂತೆ ಬಿಲ್ ವಸೂಲಾತಿ ಮಾಡಲು ತೀರ್ಮಾನಿಸಲಾಯಿತು.
ಗ್ರಾ.ಪಂ. ಉಪಾಧ್ಯಕ್ಷ ಜಯಂತ ಅಬೀರ, ಸದಸ್ಯರಾದ ವಿಠಲ ಗೌಡ ಅಗಳಿ, ಲೋಹಿತಾಕ್ಷ ಕೆಡೆಂಜಿಕಟ್ಟ, ಮೋಹನ್ ಅಗಳಿ, ಪ್ರವೀಣ್ ಕೆರೆನಾರು, ಜಯರಾಮ ಬೆಳಂದೂರು, ಉಮೇಶ್ವರಿ ಅಗಳಿ, ಪಾರ್ವತಿ ಮರಕ್ಕಡ, ಗೀತಾ ಕುವೆತ್ತೋಡಿ, ಹರಿಣಾಕ್ಷಿ ಬನಾರಿ, ಕುಸುಮಾ ಅಂಕಜಾಲು, ತಾರಾ ಅನ್ಯಾಡಿ, ಗೌರಿ ಮಾದೋಡಿ ಉಪಸ್ಥಿತರಿದ್ದರು. ಲೆಕ್ಕಸಹಾಯಕಿ ಸುನಂದಾ ವರದಿ ವಾಚಿಸಿದರು. ಪಿಡಿಒ ನಾರಾಯಣ್ ನಿರ್ವಹಿಸಿದರು. ಸಿಬ್ಬಂದಿ ಸಹಕರಿಸಿದರು.

ಆಡಳಿತ ಮಂಡಳಿಗೆ ಬೀಳ್ಕೊಡುಗೆ

ಬೆಳಂದೂರು ಪಂಚಾಯಿತಿಯ 2021-25ನೇ ಸಾಲಿನ ಆಡಳಿತ ಮಂಡಳಿಯ ಅವಧಿಯು ಫೆ. 19ರಂದು ಕೊನೆಗೂಳ್ಳಲಿದ್ದು, ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರಿಗೆ ಬೀಳ್ಕೊಡುಗೆ ನೀಡಲಾಯಿತು.
*(ಫೋಟೊ ಇದೆ ಪೈಲ್ ನೇಮ್ ಕೆಡಿಬಿ-ಪೆಬ್ರವರಿ.17-5)
ಬೆಳಂದೂರು ಗ್ರಾಮ ಪಂಚಾಯಿತಿಯಲ್ಲಿ ಆಡಳಿತ ಮಂಡಳಿ ಸದಸ್ಯರಿಗೆ ಬೀಳ್ಕೊಡುಗೆ ನಡೆಯಿತು. ಗ್ರಾ.ಪಂ.ಉಪಾಧ್ಯಕ್ಷ ಜಯಂತ ಅಬೀರ, ಸದಸ್ಯರಾದ ವಿಠಲ ಗೌಡ ಅಗಳಿ, ಲೋಹಿತಾಕ್ಷ ಕೆಡೆಂಜಿಕಟ್ಟ ಮೊದಲಾದವರಿದ್ದರು.
*********
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net