ಮನೆಗಳಲ್ಲಿ ವಸತಿನಿಲಯ ನಿರ್ಮಾಣ : ರಾಜ್ಯದಲ್ಲಿ ಅನಧಿಕೃತವಾಗಿ ವಿದೇಶಿಗರ ವಾಸ

ಪರಿಶಿಷ್ಟ ಜಾತಿ/ಪಂಗಡಗಳ ಕುಂದುಕೊರತೆ ಸಭೆಯಲ್ಲಿ ಬೆಳ್ತಂಗಡಿ ಸರ್ಕಲ್ ಇನ್‌ಸ್ಪೆಕ್ಟರ್ ರವಿ ಬಿ.ಎಸ್., ಉಪ್ಪಿನಂಗಡಿ ಸರ್ಕಲ್ ಇನ್‌ಸ್ಪೆಕ್ಟರ್ ನಾಗರಾಜ್, ದಲಿತ ಮುಖಂಡರಾದ ಸೇಸಪ್ಪ ನೆಕ್ಕಿಲು, ಶ್ರೀನಿವಾಸ್ ಉಜಿರೆ, ಸದಾನಂದ ನಾಲ್ಕೂರು ಮೊದಲಾದವರು ಉಪಸ್ಥಿತರಿದ್ದರು.
ಪರಿಶಿಷ್ಟ ಜಾತಿ/ಪಂಗಡಗಳ ಕುಂದುಕೊರತೆ ಸಭೆಯಲ್ಲಿ ಬೆಳ್ತಂಗಡಿ ಸರ್ಕಲ್ ಇನ್‌ಸ್ಪೆಕ್ಟರ್ ರವಿ ಬಿ.ಎಸ್., ಉಪ್ಪಿನಂಗಡಿ ಸರ್ಕಲ್ ಇನ್‌ಸ್ಪೆಕ್ಟರ್ ನಾಗರಾಜ್, ದಲಿತ ಮುಖಂಡರಾದ ಸೇಸಪ್ಪ ನೆಕ್ಕಿಲು, ಶ್ರೀನಿವಾಸ್ ಉಜಿರೆ, ಸದಾನಂದ ನಾಲ್ಕೂರು ಮೊದಲಾದವರು ಉಪಸ್ಥಿತರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಪರಿಶಿಷ್ಟ ಜಾತಿ/ಪಂಗಡಗಳ ಕುಂದುಕೊರತೆ ಸಭೆ
  • ಸೂಕ್ತ ಕ್ರಮಕ್ಕೆ ಆಗ್ರಹ
ಪರಿಶಿಷ್ಟ ಜಾತಿ/ಪಂಗಡಗಳ ಕುಂದುಕೊರತೆ ಸಭೆ ಮಂಗಳವಾರ ಬೆಳ್ತಂಗಡಿ ಪೊಲೀಸ್ ಉಪವಿಭಾಗದ ಡಿವೈಎಸ್ಪಿ ರೋಹಿಣಿ ಕೆ.ಸಿ.ಅಧ್ಯಕ್ಷತೆಯಲ್ಲಿ ಬೆಳ್ತಂಗಡಿ ತಾಪಂ ಸಭಾಂಗಣದಲ್ಲಿ ನಡೆಯಿತು.
ವಲಸೆ ಕಾರ್ಮಿಕರ ಮಾಹಿತಿ ಸಂಗ್ರಹ
ಅನಧಿಕೃತ ವಸತಿನಿಲಯಗಳ ಬಗ್ಗೆ ಮಾಹಿತಿ ಸಂಗ್ರಹಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಡಿವೈಎಸ್ಪಿ ತಿಳಿಸಿದರು. ತಾಲೂಕಿನ ಅಲ್ಲಲ್ಲಿ ವಲಸೆ ಕಾರ್ಮಿಕರಿದ್ದು, ಅವರ ಬಗ್ಗೆ ಮಾಹಿತಿ ಸಂಗ್ರಹಿಸುವ ಬಗ್ಗೆ ಈ ಹಿಂದಿನ ಸಭೆಯಲ್ಲಿ ಹೇಳಿದ್ದರೂ ಯಾವುದೇ ಕ್ರಮ ಕೈಗೊಳ್ಳದ ಬಗ್ಗೆ ಬೇಸರ ವ್ಯಕ್ತಪಡಿಸಿದ ಬಿ.ಕೆ.ವಸಂತ್, ವಲಸೆ ಕಾರ್ಮಿಕರು ಯಾವ ರಾಜ್ಯ, ದೇಶದವರು ಎಂದು ತಿಳಿಯಲು ಅವರ ಅಧಿಕೃತ ದಾಖಲೆ ಸಂಗ್ರಹಿಸುವುದು ಅಗತ್ಯ. ಈಗಾಗಲೇ ರಾಜ್ಯದಲ್ಲಿ ವಿದೇಶಿಗರು ಅನಧಿಕೃತವಾಗಿ ವಾಸಿಸುವ ಬಗ್ಗೆ ಮಾಹಿತಿ ಬರುತ್ತಿದ್ದು, ಈ ಬಗ್ಗೆ ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿದರೆ ಉತ್ತಮ ಎಂದರು.
ಶಿರ್ಲಾಲು ಗ್ರಾಪಂ ಮಾಜಿ ಅಧ್ಯಕ್ಷ ಪುಷ್ಪರಾಜ್ ಎಂ.ಕೆ. ಮಾತನಾಡಿ, ರಸ್ತೆ ಇಕ್ಕೆಲಗಳಲ್ಲಿ ಅಧಿಕೃತ, ಅನಧಿಕೃತವಾಗಿ ಫ್ಲೆಕ್ಸ್, ಬ್ಯಾನರ್ ಅಳವಡಿಸಲಾಗುತ್ತಿದೆ. ಇದರಿಂದ ಹಲವು ಕಡೆಗಳಲ್ಲಿ ರಸ್ತೆ ಅಪಘಾತ ಸಂಭವಿಸಿವೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಗ್ರಾಪಂಗೆ ಸೂಚಿಸಬೇಕು ಎಂದರು.
ನಲಿಕೆ ಸಮಾಜಸೇವಾ ಸಂಘದ ಮಾಜಿ ಅಧ್ಯಕ್ಷ ಸೇಸಪ್ಪ ಅಳದಂಗಡಿ ಮಾತನಾಡಿ, ಅಳದಂಗಡಿಯಲ್ಲಿ ಪೊಲೀಸ್ ಹೊರ ಠಾಣೆ ತೆರೆಯಬೇಕು. ಅಳದಂಗಡಿ, ನಾರಾವಿ ಭಾಗದಲ್ಲಿ ಯಾವುದೇ ಘಟನೆ ನಡೆದರೂ 15-20 ಕಿಮೀ ದೂರದಲ್ಲಿರುವ ವೇಣೂರು ಪೊಲೀಸ್ ಠಾಣೆಯನ್ನು ಸಂಪರ್ಕಿಸಬೇಕು ಎಂದರು.
ಕೃಷ್ಣಪ್ಪ ನಾರಾವಿ ಮಾತನಾಡಿ, ಪೊಲೀಸ್ ಠಾಣೆ ಸೇರಿದಂತೆ ಸರ್ಕಾರಿ ಇಲಾಖೆಗಳಲ್ಲಿ ದಲಿತರ ಕೆಲಸ ತಡವಾಗಿ ಮಾಡುತ್ತಾರೆ ಎಂದು ಬೇಸರ ವ್ಯಕ್ತಪಡಿಸಿದರು. ಉಪ ವಿಭಾಗದ ಎಲ್ಲ ಪೊಲೀಸ್ ಠಾಣೆಗಳಲ್ಲಿ ಸಾರ್ವಜನಿಕರ ಎಲ್ಲ ಕೆಲಸಗಳನ್ನು ತ್ವರಿತವಾಗಿ ನಡೆಸುವುದಲ್ಲದೆ, ಸಾರ್ವಜನಿಕರೊಂದಿಗೆ ಜನಸ್ನೇಹಿಯಾಗಿ ನಡೆದುಕೊಳ್ಳಲು ಸೂಚಿಸಿದರು.

ನಕಲಿ ದಾಖಲೆ ಸೃಷ್ಟಿ

ಕ್ರಿಮಿನಲ್ ಕೇಸ್ ದಾಖಲಿಸುವಂತೆ ಒತ್ತಾಯ

ಅನುದಾನಿತ ಶಾಲಾ-ಕಾಲೇಜುಗಳಲ್ಲಿ ಸರ್ಕಾರದ ನಿಯಮಾವಳಿಗಳಂತೆ ಶಿಕ್ಷಣ ಸಂಸ್ಥೆಗಳಲ್ಲಿ ಒಬ್ಬನೇ ಒಬ್ಬ ದಲಿತ ಶಿಕ್ಷಕ/ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳದಿರುವುದು ದಲಿತ ದೌರ್ಜನ್ಯವಾಗಿದೆ. ಈ ಬಗ್ಗೆ ಕ್ರಮ ಕೈಗೊಳ್ಳಲು ಒತ್ತಾಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net