ರಾಜ್ಯಮಟ್ಟದ ಸಹಕಾರ ಸಪ್ತಾಹ ಗೌರವ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಪಿ.ಬಿ.ಹರೀಶ್ ರೈ ಆಯ್ಕೆ

ವಿಜಯವಾಣಿ ದಿನಪತ್ರಿಕೆಯ ಹಿರಿಯ ವರದಿಗಾರ
ಪಿ.ಬಿ.ಹರೀಶ್ ರೈ
ಪಿ.ಬಿ.ಹರೀಶ್ ರೈ
Published on: 

ಮಂಗಳೂರು: ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳ ಬೆಂಗಳೂರು ಹಾಗೂ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ನಡೆಯುವ 73ನೇ ಸಹಕಾರ ಸಪ್ತಾಹದ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಪತ್ರಿಕಾ ರಂಗದ ಸೇವೆಗಾಗಿ ನೀಡಲಾಗುವ ಗೌರವ ಪ್ರಶಸ್ತಿಗೆ ಹಿರಿಯ ಪತ್ರಕರ್ತ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಆಯ್ಕೆಯಾಗಿದ್ದಾರೆ ಎಂದು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.

ಪತ್ರಿಕೋದ್ಯಮದಲ್ಲಿ 3 ದಶಕಗಳ ಅನುಭವ ಇರುವ ಪಿ.ಬಿ.ಹರೀಶ್ ರೈ ಅವರು ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷರಾಗಿ, ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ರಾಷ್ಟ್ರೀಯ ಮಂಡಳಿ ಸದಸ್ಯರಾಗಿ, ಐನೆಕಿದು-ಸುಬ್ರಹ್ಮಣ್ಯ ಸೇವಾ ಸಹಕಾರಿ ಬ್ಯಾಂಕಿನ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ. ವಿಜಯವಾಣಿ ದಿನಪತ್ರಿಕೆಯ ಹಿರಿಯ ವರದಿಗಾರರಾಗಿದ್ದಾರೆ.

73ನೇ ಸಹಕಾರ ಸಪ್ತಾಹದ ರಾಜ್ಯಮಟ್ಟದ ಕಾರ್ಯಕ್ರಮ ನ.20ರಂದು ಬೆಳಗ್ಗೆ 10ಕ್ಕೆ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆಯಲಿದೆ.