ಬಿಸಿಎಂನಿಂದ ವಿಶೇಷ ಸ್ವಚ್ಛತಾ ಅಭಿಯಾನ

ವಿದ್ಯಾರ್ಥಿ ನಿಲಯಗಳಲ್ಲಿ ವಿಶೇಷ ಸ್ವಚ್ಛತಾ ಅಭಿಯಾನ
ಗಾಂಧೀಜಿ ಜಯಂತಿ ಹಿನ್ನೆಲೆಯಲ್ಲಿ ಶುಕ್ರವಾರ ದ.ಕ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿದ್ಯಾರ್ಥಿ ನಿಲಯಗಳಲ್ಲಿ ವಿಶೇಷ ಸ್ವಚ್ಛತಾ ಅಭಿಯಾನ ನಡೆಯಿತು.
ಗಾಂಧೀಜಿ ಜಯಂತಿ ಹಿನ್ನೆಲೆಯಲ್ಲಿ ಶುಕ್ರವಾರ ದ.ಕ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿದ್ಯಾರ್ಥಿ ನಿಲಯಗಳಲ್ಲಿ ವಿಶೇಷ ಸ್ವಚ್ಛತಾ ಅಭಿಯಾನ ನಡೆಯಿತು.
Published on: 

-ಶ್ರವಣ್‌ಕುಮಾರ್ ನಾಳ, ಮಂಗಳೂರು

ಮಂಗಳೂರು: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿ ಹಿನ್ನೆಲೆಯಲ್ಲಿ ಶುಕ್ರವಾರ ದ.ಕ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿದ್ಯಾರ್ಥಿ ನಿಲಯಗಳಲ್ಲಿ ವಿಶೇಷ ಸ್ವಚ್ಛತಾ ಅಭಿಯಾನ ನಡೆಯಿತು.

ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ಎಸ್ ತಂಗಡಗಿ ನಿರ್ದೇಶನದಂತೆ ದ.ಕ ಜಿಲ್ಲೆಯ 21 ಮೆಟ್ರಿಕ್ ಪೂರ್ವ ಮತ್ತು 63 ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಲ್ಲಿ ಗಾಂಧೀಜಿಯವರ ಸ್ವಚ್ಛತೆ ಕುರಿತು ಚಿಂತನೆ ಹಾಗೂ ಸ್ವಚ್ಛ ಪರಿಸರದ ಮಹತ್ವವನ್ನ ವಿದ್ಯಾರ್ಥಿಗಳಿಗೆ ತಿಳಿಸುವ ಉದ್ದೇಶದಿಂದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.

ಅಭಿಯಾನದಂಗವಾಗಿ ಮಾತನಾಡಿದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಬಿಂದಿಯಾ ನಾಯಕ್, ಗಾಂಧೀಜಿಯವರ ಸ್ವಚ್ಛತೆಯೇ ದೇವರೆಂಬ ತತ್ವವನ್ನು ಮೈಗೂಡಿಸಿಕೊಳ್ಳುವ ಉದ್ದೇಶದಿಂದ ಹಮ್ಮಿಕೊಳ್ಳಲಾದ ಈ ಕಾರ್ಯಕ್ರಮದಲ್ಲಿ ನೂರಾರು ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡು ತಮ್ಮ ವಸತಿ ನಿಲಯ ಹಾಗೂ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛಗೊಳಿಸಿದ್ದಾರೆ, ವಿದ್ಯಾರ್ಥಿಗಳು ದೇಶ, ಸಮಾಜ ಮತ್ತು ಪರಿಸರದ ಸ್ವಚ್ಛತೆಯ ಮಹತ್ವವನ್ನು ಕೇವಲ ಹೊರಗಿನಿಂದ ಅರಿಯದೆ, ತಮ್ಮ ಶಾಲಾ-ಕಾಲೇಜು ಶಿಕ್ಷಣದ ಹಂತದಲ್ಲೇ ಆಳವಾಗಿ ಅರ್ಥಮಾಡಿಕೊಳ್ಳಬೇಕು. ಕೇವಲ ಪುಸ್ತಕದ ಬರಹಣವಲ್ಲದೆ, ನೈರ್ಮಲ್ಯದ ಪಾಠಗಳು ವಿದ್ಯಾರ್ಥಿಗಳ ನಡವಳಿಕೆಯಲ್ಲಿ ಅಡಕವಾಗಬೇಕು ಎಂದರು.

ಈ ಅಭಿಯಾನದಲ್ಲಿ ಜಿಲ್ಲಾ ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳು, ಮೇಲ್ವಿಚಾರಕರು, ಸಿಬ್ಬಂದಿಗಳು, ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ್ದಾರೆ.

ಶುಕ್ರವಾರ ದ.ಕ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿದ್ಯಾರ್ಥಿ ನಿಲಯಗಳಲ್ಲಿ ವಿಶೇಷ ಸ್ವಚ್ಛತಾ ಅಭಿಯಾನ ನಡೆಯಿತು.

ದ.ಕ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿದ್ಯಾರ್ಥಿ ನಿಲಯಗಳಲ್ಲಿ ವಿಶೇಷ ಸ್ವಚ್ಛತಾ ಅಭಿಯಾನ ನಡೆಯಿತು.
ದ.ಕ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿದ್ಯಾರ್ಥಿ ನಿಲಯಗಳಲ್ಲಿ ವಿಶೇಷ ಸ್ವಚ್ಛತಾ ಅಭಿಯಾನ ನಡೆಯಿತು.
ಉತ್ತಮ ಆರೋಗ್ಯಕ್ಕೆ ವೈಯಕ್ತಿಕ ಸ್ವಚ್ಛತೆ ಎಷ್ಟು ಮುಖ್ಯವೋ, ಸಮಾಜದ ಸ್ವಾಸ್ಥ್ಯಕ್ಕೆ ಪರಿಸರ ಸ್ವಚ್ಛತೆಯೂ ಅಷ್ಟೇ ಮುಖ್ಯವಾಗಿದೆ ಎಂಬ ಸಂದೇಶವನ್ನು ಈ ಅಭಿಯಾನದ ಮೂಲಕ ವಿದ್ಯಾರ್ಥಿಗಳಿಗೆ ತಲುಪಿಸುವ ಪ್ರಯತ್ನ ಇಲಾಖೆಯದ್ದು. ಸ್ವಚ್ಛತೆ ಎನ್ನುವುದು ವರ್ಷಕ್ಕೊಮ್ಮೆ ಬರುವ ಗಾಂಧಿ ಜಯಂತಿಗೆ ಅಥವಾ ಯಾವುದೋ ಒಂದು ದಿನಕ್ಕೆ ಮಾತ್ರ ಸೀಮಿತವಾಗಬಾರದು. ಬದಲಾಗಿ, ಇದು ಪ್ರತಿಯೊಬ್ಬರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಬೇಕು.
ಬಿಂದಿಯಾ ನಾಯಕ್, ಜಿಲ್ಲಾ ಅಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ದ.ಕ
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net