ಶ್ರೀನಿವಾಸ್‌ ವಿವಿ ಕುಲಾಧಿಪತಿ ಡಾ. ಸಿಎ ರಾಘವೇಂದ್ರ ರಾವ್ ನಿಧನ

ಶ್ರೀನಿವಾಸ್‌ ಯುನಿವರ್ಸಿಟಿಯ ಕುಲಾಧಿಪತಿ ಡಾ. ಸಿಎ  ರಾಘವೇಂದ್ರ ರಾವ್
ಶ್ರೀನಿವಾಸ್‌ ಯುನಿವರ್ಸಿಟಿಯ ಕುಲಾಧಿಪತಿ ಡಾ. ಸಿಎ ರಾಘವೇಂದ್ರ ರಾವ್
Published on
(SIRC) ఐసిఎఐ (ICAI) ದಕ್ಷಿಣ ಭಾರತ ಪ್ರಾದೇಶಿಕ ಮಂಡಳಿಯ ಸದಸ್ಯರಾಗಿ, ಸಿಎ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಮತ್ತು ಎಸ್‌ಐಆರ್‌ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. 1985 ರಿಂದ 1987ರ ಅವಧಿಯಲ್ಲಿ ಕೆನರಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ (CCCI) ಅಧ್ಯಕ್ಷರಾಗಿ ಉದ್ಯಮ ಕ್ಷೇತ್ರಕ್ಕೆ ಮಾರ್ಗದರ್ಶನ ನೀಡಿದ್ದರು.
1988ರಲ್ಲಿ ತಮ್ಮ ತಂದೆಯ ಹೆಸರಿನಲ್ಲಿ ಎ. ಶಾಮರಾವ್‌ ಫೌಂಡೇಶನ್ ಸ್ಥಾಪಿಸುವ ಮೂಲಕ ಶಿಕ್ಷಣ ಕ್ಷೇತ್ರಕ್ಕೆ ಕಾಲಿಟ್ಟರು. ಕೇವಲ 7 ವಿದ್ಯಾರ್ಥಿಗಳೊಂದಿಗೆ ಶ್ರೀನಿವಾಸ್‌ ಹೋಟೆಲ್ ಮ್ಯಾನೇಜ್‌ಮೆಂಟ್‌ ಕಾಲೇಜು ಆರಂಭಿಸಿದರು. ಫಿಸಿಯೋಥೆರಪಿ, ನಂತರ ಇಂಜಿನಿಯರಿಂಗ್, ಮ್ಯಾನೇಜ್‌ಮೆಂಟ್ ಸೇರಿದಂತೆ 16ಕ್ಕು ಹೆಚ್ಚು ವೃತ್ತಿಪರ ಶಿಕ್ಷಣ ಸಂಸ್ಥೆಗಳನ್ನು ಕಟ್ಟಿ ಬೆಳೆಸಿದ್ದು ಈಗ ಶ್ರೀನಿವಾಸ್ ವಿಶ್ವವಿದ್ಯಾಲಯವಾಗಿ ಹೆಮ್ಮರವಾಗಿ ಬೆಳೆದಿದೆ.
ಮೃತರು ಪತ್ನಿ ವಿಜಯಲಕ್ಷ್ಮಿ ಪುತ್ರಿ ಪದ್ಮನಿ, ಪುತ್ರ ಶ್ರೀನಿವಾಸ್ ಮತ್ತು ನಾಲ್ವರು ಮೊಮ್ಮಕ್ಕಳನ್ನು ಅಗಲಿದ್ದಾರೆ. ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ಶ್ರೀನಿವಾಸ್ ವಿಶ್ವವಿದ್ಯಾಲಯದ ಮುಕ್ಕ ಕ್ಯಾಂಪಸ್‌ನಲ್ಲಿ ಇಂದು ಬೆಳಗ್ಗೆ 11 ಗಂಟೆಯಿಂದ ವ್ಯವಸ್ಥೆ ಮಾಡಲಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net