ನೇಣುಬಿಗಿದು ಆತ್ಮಹತ್ಯೆ

ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
DEATH
DEATH
Published on: 

ಬಂಟ್ವಾಳ: ಸಜೀಪಮೂಡ ಗ್ರಾಮದ ನಗ್ರಿ ಕಾಂಜಿಲ ಎಂಬಲ್ಲಿ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ರಜಿತ್ ಕುಮಾರ್ (39) ಎಂಬುವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಬ್ಯಾಗ್ ಕಂಪನಿಯೊಂದರಲ್ಲಿ ಮೇಲ್ವಿಚಾರಕರಾಗಿ ಕೆಲಸ ಮಾಡುತ್ತಿದ್ದ ಅವರು ಊರಿಗೆ ಬಂದು ಅಕ್ಕನ ಮನೆಯಲ್ಲಿ ವಾಸವಾಗಿದ್ದರು. ಎರಡು ದಿನಗಳ ಹಿಂದೆ ಮಂಗಳೂರಿನ ಆಸ್ಪತ್ರೆಗೆ ಚಿಕಿತ್ಸೆಗೂ ತೆರಳಿದ್ದರು ಎನ್ನಲಾಗಿದೆ. ಗುರುವಾರ ರಾತ್ರಿ ಊಟ ಮಾಡಿ ಮಲಗಿದ್ದವರು ಶುಕ್ರವಾರ ಬೆಳಗ್ಗೆ ಎದ್ದಿರಲಿಲ್ಲ. ಮನೆಯವರು ಕೋಣೆಗೆ ಹೋಗಿ ನೋಡಿದಾಗ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂದಿದೆ. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪಘಾತ ಗಾಯಾಳು ಸಾವು

ಬಂಟ್ವಾಳ: ಪುದು ಗ್ರಾಮದ ಕಡೆಗೋಳಿ ಜಂಕ್ಷನ್‌ನಲ್ಲಿ ದಾಟುತ್ತಿದ್ದ ವೇಳೆ ದ್ವಿಚಕ್ರವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಹಿರಿಯ ಟೈಲರ್ ಕೇಶವ ಭಂಡಾರಿ (72) ಎಂಬುವರು ಚಿಕಿತ್ಸೆಗೆ ಸ್ಪಂದಿಸದೆ ಶುಕ್ರವಾರ ಮೃತಪಟ್ಟಿದ್ದಾರೆ. ಪೆಲಪಾಡಿ ನಿವಾಸಿಯಾಗಿದ್ದ ಅವರು ಟೈಲರಿಂಗ್ ವೃತ್ತಿ ನಡೆಸುತ್ತಿದ್ದರು. ಗುರುವಾರ ಬೆಳಗ್ಗೆ ಎಂದಿನಂತೆ ಮನೆಯಿಂದ ಟೈಲರಿಂಗ್ ಅಂಗಡಿ ಹೊರಟವರು ಕಡೆಗೋಳಿ ಜಂಕ್ಷನ್‌ನಲ್ಲಿ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಡಿವೈಡರ್ ದಾಟುತ್ತಿದ್ದ ವೇಳೆ ದ್ವಿಚಕ್ರವಾಹನ ಡಿಕ್ಕಿ ಹೊಡೆದಿತ್ತು. ತಲೆ ಹಾಗೂ ಕಾಲುಗಳಿಗೆ ಗಂಭೀರವಾಗಿ ಗಾಯಗೊಂಡ ಅವರನ್ನು ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪತ್ನಿ, ಪುದು ಗ್ರಾಪಂ ವಾಜಿ ಸದಸ್ಯೆ ಹಾಗೂ ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ.

ಹಿರಿಯ ಟೈಲರ್ ಕೇಶವ ಭಂಡಾರಿ
ಹಿರಿಯ ಟೈಲರ್ ಕೇಶವ ಭಂಡಾರಿ
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net