

ಇನ್ನೂರರಷ್ಟು ಭಾಷೆಗಳು ಅರವತ್ತರಿಂದ ಎಂಬತ್ತು ವರ್ಷಗಳಲ್ಲಿ ನಶಿಸಿಹೋಗಬಹುದು ಎಂದು ತಜ್ಞರು ಅಭಿಪ್ರಾಯಪಡುತ್ತಾರೆ. ಆ ಭಾಷೆಗಳ ಸಾಲಿನಲ್ಲಿ ಕನ್ನಡವೂ ಇದೆ. ಸರಿಸುಮಾರು ಹತ್ತೊಂಬತ್ತು ಸಾವಿರದಷ್ಟಿದ್ದ ಭಾರತದ ಭಾಷೆಗಳಲ್ಲಿ ಅವೆಷ್ಟೋ ನಶಿಸಿಹೋಗಿವೆ. ಅಷ್ಟೊಂದು ಭಾಷೆಗಳು ಇನ್ನಿಲ್ಲವಾಗುತ್ತಿರುವಾಗ ಹೊಸದೊಂದು ಭಾಷೆ ಸೃಷ್ಟಿಯಾಗಿದೆಯೆಂಬ ಯಾವುದೇ ಕುರುಹುಗಳು ಕಂಡು ಬರುವುದಿಲ್ಲ. ಹಾಗಿದ್ದರೂ ಹೊಸದಾದ ಭಾಷೆಯೊಂದನ್ನು ಆವಿಷ್ಕಾರಗೊಳಿಸಿ ಬಹುತೇಕ ಯಶಸ್ಸು ಕಂಡ ಈ ಮಣ್ಣಿನ ವ್ಯಕ್ತಿಗಳನ್ನು ಮರೆಯುವಂತಿಲ್ಲ.